ಸರಿಯಾಗಿ ಓದಲು ಬರುತ್ತಿಲ್ಲ ಎಂಬ ಕಾರಣಕ್ಕೆ 10 ವರ್ಷದ ಬಾಲಕನ ಬಾಯಿಗೆ ಬಟ್ಟೆ ತುರುಕಿ, ಕಟ್ಟಿಗೆಯಿಂದ ಕಣ್ಣು, ತಲೆ, ಬೆನ್ನು ಹಾಗೂ ಕೈಕಾಲುಗಳಿಗೆ ಮನಬಂದಂತೆ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ಫಾಜ್ ಶಾಲೆಯಲ್ಲಿ ಕೇಳಿಬಂದಿದೆ.
ರಾಯಚೂರು, ನ.11: ಆಧುನಿಕ ರಸಾಯನಶಾಸ್ತ್ರದಲ್ಲಿ ಅಣುಗಳ ರಚನೆ, ವಸ್ತುಗಳ ಗುಣಲಕ್ಷಣ ಹಾಗೂ ಅವುಗಳ ಸಂಯೋಜನೆಯನ್ನು ಗುರುತಿಸುವಲ್ಲಿ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ಲತಾ ಎಂ.ಎಸ್. ಹೇಳಿದರು.
ಹಾಲು, ಮೊಸರು, ತುಪ್ಪ ಹಾಗೂ ಸಾರಿಗೆ ಬಸ್‌ಗಳ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರ ಜೀವನ ನಿರ್ವಹಣೆ ದುಸ್ತರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಎಲ್‌ವಿಡಿ ಕಾಲೇಜು ಹಾಗೂ ಕೆಎಸ್‌ಸಿಎ ಕ್ರಿಕೆಟ್ ಮೈದಾನಗಳಲ್ಲಿ ಆರಂಭವಾದ 14 ವರ್ಷದೊಳಗಿನವರ (ಅಂಡರ್-14) ಅಂತರ ಜಿಲ್ಲಾ ಕ್ರಿಕೆಟ್ ಪಂದ್ಯಾವಳಿಯ 'ಬಿ' ಗುಂಪಿನ ಪಂದ್ಯಗಳಲ್ಲಿ ವಿಜಯಪುರ ಹಾಗೂ ಕೊಪ್ಪಳ ತಂಡಗಳು ಗೆಲುವು ಸಾಧಿಸಿವೆ.
ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಧಕ್ಕೆ ತರುವ ಸೆಂಟ್ರಲ್ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ನಿರ್ಧಾರವನ್ನು ಕೈಬಿಟ್ಟು, ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಂಪೂರ್ಣ ಜವಾಬ್ದಾರಿಯನ್ನು ಅಡುಗೆ ಸಿಬ್ಬಂದಿಗೆ ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಪದಾಧಿಕಾರಿಗಳು ಬುಧವಾರ…
ವೀರವನಿತೆ ಒನಕೆ ಓಬವ್ವ ಅವರ ಕಾಯಕನಿಷ್ಠೆ, ಧೈರ್ಯ, ಸಾಹಸ ಹಾಗೂ ದೇಶಪ್ರೇಮ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾಗಿದ್ದು, ವಿದ್ಯಾರ್ಥಿನಿಯರು ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.
ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಷಿಣಗಿ ಗ್ರಾಮದ ಪರಿಶಿಷ್ಟ ಜಾತಿ ಓಣಿಯಲ್ಲಿ ಕಳೆದ 30ರಿಂದ 35 ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಯುವಜನತೆ ಹಾಗೂ ಮಹಿಳೆಯರು ವೀರವನಿತೆ ಒನಕೆ ಓಬವ್ವ ಅವರ ಅಸಾಧಾರಣ ಸಾಹಸ, ದೇಶಪ್ರೇಮ, ಧೈರ್ಯ ಮತ್ತು ಸ್ವಾಭಿಮಾನದ ಆದರ್ಶಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಕರೆ ನೀಡಿದರು.