ಲಿಂಗಸುಗೂರು: ಪಟ್ಟಣದಲ್ಲಿ ಪಂಚಮಸಾಲಿ ಸಮಾಜದ ರಾಣಿ ಚೆನ್ನಮ್ಮ ಸಭಾಭವನ ನಿರ್ಮಾಣಕ್ಕೆ ₹25 ಲಕ್ಷ ಅನುದಾನ ಮಂಜೂರು ಮಾಡುವಂತೆ ಒತ್ತಾಯಿಸಿ ಸಮಾಜದ ಮುಖಂಡರು ರಾಯಚೂರು ಹಾಗೂ ಕೊಪ್ಪಳ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಪಂಚಮಸಾಲಿ ಸಮಾಜವು ಸ್ವಂತ ನಿವೇಶನ ಹೊಂದಿದ್ದು, ಈ ಸ್ಥಳದಲ್ಲಿ ಸಮಾಜದ ಸಭೆ, ಸಮಾರಂಭಗಳು ಹಾಗೂ ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವಂತೆ ರಾಣಿ ಚೆನ್ನಮ್ಮ ಸಭಾಭವನ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಮುಖಂಡರು ತಿಳಿಸಿದರು.

ಸಭಾಭವನ ನಿರ್ಮಾಣಕ್ಕೆ ಅಗತ್ಯವಿರುವ ಆರ್ಥಿಕ ನೆರವು ಒದಗಿಸಲು ₹25 ಲಕ್ಷ ಅನುದಾನ ಮಂಜೂರು ಮಾಡಬೇಕು. ಇದರಿಂದ ಸಮಾಜದ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಅವರನ್ನು ಪಂಚಮಸಾಲಿ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಮಹಾಂತೇಶ ಪಾಟೀಲ್ ಮುದಗಲ್, ತಾಲೂಕು ಅಧ್ಯಕ್ಷ ವಿಜಯಕುಮಾರ, ಸುಭಾಷ ಪಲ್ಲೇದ್, ಸಿ.ಸಿ. ಕರಡಕಲ್, ಮಹೇಶ ಶಂಕರಗೌಡ ಅಮರಾವತಿ, ಮಹಾಂತೇಶ ತಾವರಗೇರಾ, ಸಂಗಣ್ಣ ಆನೆಹೊಸೂರು, ಶ್ರೀಕಾಂತ, ವಿಜಯಲಕ್ಷ್ಮೀ ದೇಸಾಯಿ, ಶಿವಮ್ಮ ಸೇರಿದಂತೆ ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.