ರಾಯಚೂರು, ನ.11: ಆಧುನಿಕ ರಸಾಯನಶಾಸ್ತ್ರದಲ್ಲಿ ಅಣುಗಳ ರಚನೆ, ವಸ್ತುಗಳ ಗುಣಲಕ್ಷಣ ಹಾಗೂ ಅವುಗಳ ಸಂಯೋಜನೆಯನ್ನು ಗುರುತಿಸುವಲ್ಲಿ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ಲತಾ ಎಂ.ಎಸ್. ಹೇಳಿದರು.
ಹಾಲು, ಮೊಸರು, ತುಪ್ಪ ಹಾಗೂ ಸಾರಿಗೆ ಬಸ್ಗಳ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರ ಜೀವನ ನಿರ್ವಹಣೆ ದುಸ್ತರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಎಲ್ವಿಡಿ ಕಾಲೇಜು ಹಾಗೂ ಕೆಎಸ್ಸಿಎ ಕ್ರಿಕೆಟ್ ಮೈದಾನಗಳಲ್ಲಿ ಆರಂಭವಾದ 14 ವರ್ಷದೊಳಗಿನವರ (ಅಂಡರ್-14) ಅಂತರ ಜಿಲ್ಲಾ ಕ್ರಿಕೆಟ್ ಪಂದ್ಯಾವಳಿಯ 'ಬಿ' ಗುಂಪಿನ ಪಂದ್ಯಗಳಲ್ಲಿ ವಿಜಯಪುರ ಹಾಗೂ ಕೊಪ್ಪಳ ತಂಡಗಳು ಗೆಲುವು ಸಾಧಿಸಿವೆ.
ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಧಕ್ಕೆ ತರುವ ಸೆಂಟ್ರಲ್ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ನಿರ್ಧಾರವನ್ನು ಕೈಬಿಟ್ಟು, ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಂಪೂರ್ಣ ಜವಾಬ್ದಾರಿಯನ್ನು ಅಡುಗೆ ಸಿಬ್ಬಂದಿಗೆ ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಪದಾಧಿಕಾರಿಗಳು ಬುಧವಾರ…
ವೀರವನಿತೆ ಒನಕೆ ಓಬವ್ವ ಅವರ ಕಾಯಕನಿಷ್ಠೆ, ಧೈರ್ಯ, ಸಾಹಸ ಹಾಗೂ ದೇಶಪ್ರೇಮ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾಗಿದ್ದು, ವಿದ್ಯಾರ್ಥಿನಿಯರು ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.
ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಷಿಣಗಿ ಗ್ರಾಮದ ಪರಿಶಿಷ್ಟ ಜಾತಿ ಓಣಿಯಲ್ಲಿ ಕಳೆದ 30ರಿಂದ 35 ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಯುವಜನತೆ ಹಾಗೂ ಮಹಿಳೆಯರು ವೀರವನಿತೆ ಒನಕೆ ಓಬವ್ವ ಅವರ ಅಸಾಧಾರಣ ಸಾಹಸ, ದೇಶಪ್ರೇಮ, ಧೈರ್ಯ ಮತ್ತು ಸ್ವಾಭಿಮಾನದ ಆದರ್ಶಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕು ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಕರೆ ನೀಡಿದರು.
ನಾಡಿನ ಇತಿಹಾಸದಲ್ಲಿ ಅಪ್ರತಿಮ ಧೈರ್ಯ, ಸಾಹಸ ಮತ್ತು ಶೌರ್ಯದಿಂದ ಗುರುತಿಸಿಕೊಂಡಿರುವ ವೀರವನಿತೆ ಒನಕೆ ಓಬವ್ವ ಅವರ ಆದರ್ಶಗಳನ್ನು ಪ್ರತಿಯೊಬ್ಬ ಮಹಿಳೆಯೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಭೀಮರಾಯ ಬಿ.
ಇತಿಹಾಸದ ಪುಟಗಳಲ್ಲಿ ಸಾಹಸ, ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ವೀರರಾಣಿ ಒನಕೆ ಓಬವ್ವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕವಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರು ಹೇಳಿದರು.
ಸರಿಯಾಗಿ ಓದಲು ಬರುತ್ತಿಲ್ಲ ಎಂಬ ಕಾರಣಕ್ಕೆ 10 ವರ್ಷದ ಬಾಲಕನ ಬಾಯಿಗೆ ಬಟ್ಟೆ ತುರುಕಿ, ಕಟ್ಟಿಗೆಯಿಂದ ಕಣ್ಣು, ತಲೆ, ಬೆನ್ನು ಹಾಗೂ ಕೈಕಾಲುಗಳಿಗೆ ಮನಬಂದಂತೆ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ಫಾಜ್ ಶಾಲೆಯಲ್ಲಿ ಕೇಳಿಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಕರ ರೀತಿಯಲ್ಲಿ ವರ್ತಿಸಿದ್ದಲ್ಲದೆ, ರೌಡಿಶೀಟರ್ ಹಾಗೂ ವಂಚನೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಯಚೂರು ಜಿಲ್ಲಾ ಹತ್ತಿ ಬೆಳೆಗಾರರ ರೈತರ ಹೋರಾಟ ಸಮಿತಿ ಅಧ್ಯಕ್ಷ ಪಿ.ಎಸ್.
ತಾಲೂಕಿನ ಇಡಪನೂರು ಗ್ರಾಮದಿಂದ ಮೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ₹70 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿರುವ ಇಡಪನೂರು ಗ್ರಾಮದ ನಿವಾಸಿ ಯೋಹಾನ್, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ…
ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಅಪಾರ ತ್ಯಾಗ ಮಾಡಿದ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಅವರ ದೇಶಪ್ರೇಮ, ಸಾಹಸ ಹಾಗೂ ಜನಪರ ಆಡಳಿತ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.
ತಾಲೂಕಿನ ಚೀಕಲಪರ್ವಿ ಗ್ರಾಮದ ಶ್ರೀ ರುದ್ರಮುನೀಶ್ವರ ಮಠದಲ್ಲಿ ಶತಮಾನೋತ್ಸವದ ಅಂಗವಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ದಾಸೋಹ ಭವನಕ್ಕೆ ಹಾಲ್ವಿಯ ಚರಣಗಿರಿ ಸಂಸ್ಥಾನ ಮಠದ ಶ್ರೀ ಅಭಿನವ ಮಹಾಂತ ಮಹಾಸ್ವಾಮಿಗಳು ಶಂಕುಸ್ಥಾಪನೆ ನೆರವೇರಿಸಿದರು.
ರಾಯಚೂರು, ನ. 10: ವಿದೇಶಿ ಸಂಸ್ಕೃತಿಯ ಪ್ರಭಾವದಿಂದ ನಮ್ಮ ನಾಡಿನ ಸಂಸ್ಕೃತಿ ಹಾಗೂ ಪರಂಪರೆಯ ಕಲೆಗಳು ಮರೆಯಾಗುತ್ತಿವೆ. ಮುಂದಿನ ಯುವ ಪೀಳಿಗೆಗೆ ನಾಡಿನ ಸೊಗಡನ್ನು ಪರಿಚಯಿಸುವ ದೇಸಿ ಕಲೆಗಳನ್ನು ಉಳಿಸಿ ಬೆಳೆಸುವುದು ಅಗತ್ಯವಾಗಿದೆ.
ನೂತನ ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಿರುವ ಫಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ, ಫಲಕನಮರಡಿ, ಮೂಡಲಗುಂಡ, ಮದರಕಲ್, ದೇವರಗುಡ್ಡ ಹಾಗೂ ಊಟಿ ಗ್ರಾಮಗಳನ್ನು ಪುನಃ ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಿ, ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ನವೆಂಬರ್ 6ರಂದು ಜಿಲ್ಲಾಧಿಕಾರಿಗಳಿಗೆ…
ದೀಪಾವಳಿ ಹಬ್ಬದ ಬಲಿಪಾಡ್ಯಮಿಯ ಪವಿತ್ರ ದಿನದ ಅಂಗವಾಗಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀ ಬ್ರಹ್ಮಕರಾರ್ಚಿತ ಶ್ರೀ ಮೂಲರಾಮದೇವರು ಸೇರಿದಂತೆ ಶ್ರೀಮಠದ ಸಂಸ್ಥಾನ ಪ್ರತಿಮೆಗಳಿಗೆ ವಿಧಿವಿಧಾನಗಳೊಂದಿಗೆ ಮಹಾಭಿಷೇಕ ನೆರವೇರಿಸಿದರು.