ನಾಡಿನ ಇತಿಹಾಸದಲ್ಲಿ ಅಪ್ರತಿಮ ಧೈರ್ಯ, ಸಾಹಸ ಮತ್ತು ಶೌರ್ಯದಿಂದ ಗುರುತಿಸಿಕೊಂಡಿರುವ ವೀರವನಿತೆ ಒನಕೆ ಓಬವ್ವ ಅವರ ಆದರ್ಶಗಳನ್ನು ಪ್ರತಿಯೊಬ್ಬ ಮಹಿಳೆಯೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಭೀಮರಾಯ ಬಿ.
ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಅಪಾರ ತ್ಯಾಗ ಮಾಡಿದ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಅವರ ದೇಶಪ್ರೇಮ, ಸಾಹಸ ಹಾಗೂ ಜನಪರ ಆಡಳಿತ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.
ತಾಲೂಕಿನ ಚೀಕಲಪರ್ವಿ ಗ್ರಾಮದ ಶ್ರೀ ರುದ್ರಮುನೀಶ್ವರ ಮಠದಲ್ಲಿ ಶತಮಾನೋತ್ಸವದ ಅಂಗವಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ದಾಸೋಹ ಭವನಕ್ಕೆ ಹಾಲ್ವಿಯ ಚರಣಗಿರಿ ಸಂಸ್ಥಾನ ಮಠದ ಶ್ರೀ ಅಭಿನವ ಮಹಾಂತ ಮಹಾಸ್ವಾಮಿಗಳು ಶಂಕುಸ್ಥಾಪನೆ ನೆರವೇರಿಸಿದರು.
ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರು ಧೈರ್ಯ, ಸಾಹಸ ಹಾಗೂ ದೇಶಪ್ರೇಮದ ಪ್ರತೀಕವಾಗಿದ್ದು, ಅವರ ಹೋರಾಟದ ಇತಿಹಾಸ ಮತ್ತು ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಜರತ್ ಟಿಪ್ಪು ಸುಲ್ತಾನ್ ಸಂಘದ ಪದಾಧಿಕಾರಿ ಮೊಹಮ್ಮದ್ ಮುಸ್ತಫಾ ಅರೋಲಿ…
ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಅಗತ್ಯವಿದ್ದು, ಸಂವಿಧಾನ ನೀಡಿರುವ ಹಕ್ಕುಗಳು ಹಾಗೂ ಕಾನೂನುಗಳ ಕುರಿತು ಅರಿವು ಹೊಂದಿದಾಗ ಮಾತ್ರ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಸಾಧ್ಯ ಎಂದು ಮಾನ್ವಿ ಜೆಎಂಎಫ್ಸಿ ಹಾಗೂ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಆನಂದ ಹೆಚ್.
ತಾಲೂಕಿನ ಹರನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಅವರ ಕುಟುಂಬಕ್ಕೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಸರ್ಕಾರದ ವತಿಯಿಂದ ಮಂಜೂರಾದ ₹5 ಲಕ್ಷ ಪರಿಹಾರದ ಚೆಕ್ ವಿತರಿಸಿದರು.
ರಾಯಚೂರು ಜಿಲ್ಲೆಯ ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಸಾಹಿತ್ಯ ಕೃಷಿ ಮಾಡಿರುವ ಸಾಹಿತಿಗಳು, ಲೇಖಕರು, ಕವಿಗಳು, ವಿಮರ್ಶಕರು ಹಾಗೂ ಚಿಂತಕರ ಸಮಗ್ರ ಮಾಹಿತಿಯನ್ನು ಒಳಗೊಂಡ ಪರಿಚಯ ಪುಸ್ತಕವನ್ನು ಹೊರತರಲು ಉದ್ದೇಶಿಸಲಾಗಿದ್ದು, ಸಂಬಂಧಪಟ್ಟವರಿಂದ ಮಾಹಿತಿ ಆಹ್ವಾನಿಸಲಾಗಿದೆ ಎಂದು ಪಟ್ಟಣದ ನೇತಾಜಿ ಪ್ರಕಾಶನದ ಮುಖ್ಯಸ್ಥೆ ಕೆ.
ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳಲು ಯೋಗ ಮತ್ತು ಪ್ರಾಣಾಯಾಮ ಸಹಕಾರಿಯಾಗಿದ್ದು, ಸಾರ್ವಜನಿಕರಲ್ಲಿ ಯೋಗಾಭ್ಯಾಸದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನವೆಂಬರ್ 11ರಿಂದ 15ರವರೆಗೆ ಐದು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ವಿರಾಟ್ ಶಿಬಿರ ಆಯೋಜಿಸಲಾಗಿದೆ ಎಂದು ಪತಂಜಲಿ ಯೋಗ ಸಮಿತಿಯ ತಾಲೂಕು ಸಂಚಾಲಕ ಕುಮಾರಸ್ವಾಮಿ ಮೇದಾ ತಿಳಿಸಿದರು.
ಸರ್ಕಾರಿ ಸೇವೆಯಿಂದ ನಿವೃತ್ತಿಯಾಗುವುದು ವೃತ್ತಿ ಜೀವನದ ಸಹಜ ಪ್ರಕ್ರಿಯೆಯಾಗಿದ್ದು, ನಿವೃತ್ತಿಯ ನಂತರವೂ ಉತ್ತಮ ಹವ್ಯಾಸಗಳು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನವೆಂಬರ್ 8ರಂದು ಸಿಂಧನೂರಿನಿಂದ ತಿಡಿಗೋಳ ಗ್ರಾಮದವರೆಗೆ ಬೈಕ್ ರ್ಯಾಲಿ ಹಾಗೂ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ…
ತಾಲೂಕಿನ ಬೆಟ್ಟದೂರು ಗ್ರಾಮದ ಮಾರೆಮ್ಮ ದೇವಸ್ಥಾನದಲ್ಲಿ ದೇವಿ ಮೂರ್ತಿಗಳಿಗೆ ಅಳವಡಿಸಲಾಗಿದ್ದ ಸುಮಾರು ₹6 ಲಕ್ಷ ಮೌಲ್ಯದ ಬೆಳ್ಳಿ ಮುಖವಾಡಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ನವೆಂಬರ್ 2ರಂದು ನಡೆದಿದ್ದು, ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಚೀಕಲಪರ್ವಿ ಗ್ರಾಮದ ಶ್ರೀ ವಿಜಯದಾಸರ ಜನ್ಮಸ್ಥಳ, ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಾನ ಹಾಗೂ ವಿಜಯದಾಸರ ಕಟ್ಟೆಗೆ ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಮತ್ತು ಕಿರಿಯ ಶ್ರೀಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದಂಗಳವರು ಭೇಟಿ ನೀಡಿ…
ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು, ಪ್ರಾಮಾಣಿಕತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಜವಾಬ್ದಾರಿ ತಂದೆ-ತಾಯಿಯರ ಮೇಲಿದೆ ಎಂದು ಸಂಪನ್ಮೂಲ ವ್ಯಕ್ತಿ ಆಂಜನೇಯ ನಸಲಾಪುರ ಹೇಳಿದರು.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯದ ಪಕ್ಷಿವೀಕ್ಷಕ ಸಮುದಾಯದ ವತಿಯಿಂದ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಮ್ಮಿಕೊಂಡಿದ್ದ ‘ಕರ್ನಾಟಕ ರಾಜ್ಯೋತ್ಸವ ಪಕ್ಷಿಗಣತಿ–2026’ ಕಾರ್ಯಕ್ರಮವು ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಯಿತು.
ಪಟ್ಟಣದ ಸುಮಾರು 50 ಸಾವಿರ ಜನರಿಗೆ ಕುಡಿಯುವ ನೀರು ಪೂರೈಸುವ ಪುರಸಭೆಯ ಕೆರೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ ಕೆರೆಯನ್ನು ಸಂಪೂರ್ಣವಾಗಿ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.
ರಾಯಚೂರಿನಲ್ಲಿ ಇತ್ತೀಚೆಗೆ ದುಷ್ಕರ್ಮಿಯಿಂದ ಹತ್ಯೆಗೀಡಾದ ಆರ್ಯವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ದಿವಂಗತ ಬಾಪುರ ನರಸಿಂಹ ಶೆಟ್ಟಿ ಅವರ ಕುಟುಂಬಕ್ಕೆ ಮಾನ್ವಿ ತಾಲೂಕು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ವತಿಯಿಂದ ₹2 ಲಕ್ಷ ಆರ್ಥಿಕ ನೆರವು ನೀಡಲಾಯಿತು.