ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯದ ಪಕ್ಷಿವೀಕ್ಷಕ ಸಮುದಾಯದ ವತಿಯಿಂದ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಮ್ಮಿಕೊಂಡಿದ್ದ ‘ಕರ್ನಾಟಕ ರಾಜ್ಯೋತ್ಸವ ಪಕ್ಷಿಗಣತಿ–2026’ ಕಾರ್ಯಕ್ರಮವು ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಯಿತು.
ಪಟ್ಟಣದ ಸುಮಾರು 50 ಸಾವಿರ ಜನರಿಗೆ ಕುಡಿಯುವ ನೀರು ಪೂರೈಸುವ ಪುರಸಭೆಯ ಕೆರೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ ಕೆರೆಯನ್ನು ಸಂಪೂರ್ಣವಾಗಿ ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.
ರಾಯಚೂರಿನಲ್ಲಿ ಇತ್ತೀಚೆಗೆ ದುಷ್ಕರ್ಮಿಯಿಂದ ಹತ್ಯೆಗೀಡಾದ ಆರ್ಯವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ದಿವಂಗತ ಬಾಪುರ ನರಸಿಂಹ ಶೆಟ್ಟಿ ಅವರ ಕುಟುಂಬಕ್ಕೆ ಮಾನ್ವಿ ತಾಲೂಕು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ವತಿಯಿಂದ ₹2 ಲಕ್ಷ ಆರ್ಥಿಕ ನೆರವು ನೀಡಲಾಯಿತು.
ತಾಲೂಕಿನ ಚೀಕಲಪರ್ವಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಮೌನ ಮಿತ್ರ ಯೋಗ ಸಮಿತಿ ವತಿಯಿಂದ ಪ್ರಕೃತಿಚಿಕಿತ್ಸೆಯ ಮಹತ್ವವನ್ನು ಪರಿಚಯಿಸುವ ಉದ್ದೇಶದಿಂದ ಮಣ್ಣಿನ ಸ್ನಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಹೆಮ್ಮೆಯ ಸಂಕೇತವಾಗಿರುವ ಕನ್ನಡ ರಾಜ್ಯೋತ್ಸವವು ಪ್ರತಿಯೊಬ್ಬ ಕನ್ನಡಿಗನ ಸ್ವಾಭಿಮಾನದ ಹಬ್ಬವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಮಾಧ್ಯಮದಲ್ಲಿ ಶಿಕ್ಷಣ ಪಡೆಯುತ್ತಿದ್ದರೂ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿ ಮತ್ತು ಅಭಿಮಾನವನ್ನು ಸದಾ ಉಳಿಸಿಕೊಳ್ಳಬೇಕು ಎಂದು ಶ್ರೀ ವೆಂಕಟೇಶ್ವರ ಶಿಕ್ಷಣ…
ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಇತಿಹಾಸ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮತ್ತು ಅಭಿಮಾನ ಮೂಡಿಸಲು ರಸಪ್ರಶ್ನೆಯಂತಹ ಶೈಕ್ಷಣಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಶಾಸಕ ಜಿ.
ಜಾಗತೀಕರಣ ಮತ್ತು ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಇಂಗ್ಲಿಷ್ ಸೇರಿದಂತೆ ಇತರ ಭಾಷೆಗಳನ್ನು ಕಲಿಯುವುದು ಎಷ್ಟು ಅಗತ್ಯವೋ, ಅಷ್ಟೇ ಮಹತ್ವವನ್ನು ಮಾತೃಭಾಷೆ ಕನ್ನಡದ ಸಂರಕ್ಷಣೆ ಮತ್ತು ಬೆಳವಣಿಗೆಗೂ ನೀಡಬೇಕು ಎಂದು ಮಾನ್ವಿ ಶಾಸಕ ಜಿ.
ಪಟ್ಟಣದ ವಾಕ್ಸಿದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸುವುದರ ಜೊತೆಗೆ ವಿದ್ಯಾರ್ಥಿಗಳ ವೈಜ್ಞಾನಿಕ ಪ್ರತಿಭೆಯನ್ನು ಅನಾವರಣಗೊಳಿಸುವ ವಿಜ್ಞಾನ ವೈಭವ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಮಾನ್ವಿ: ವೈದ್ಯಕೀಯ ಶಿಕ್ಷಣದ ಮೂಲಕ ಗಳಿಸಿದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು. ರೋಗಿಗಳ ಆರೋಗ್ಯ ಸುಧಾರಣೆಗೆ ನಿರಂತರವಾಗಿ ಶ್ರಮಿಸುವ ಮೂಲಕ ವೈದ್ಯಕೀಯ ವೃತ್ತಿಯ ಘನತೆ ಕಾಪಾಡಬೇಕು ಎಂದು ಎಸ್.ವಿ.ವಿ.ಕೆ. ಟ್ರಸ್ಟ್ ಅಧ್ಯಕ್ಷ ಹಾಗೂ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ 5ನೇ ವಾರ್ಡ್ನ ಜನವಸತಿ ಪ್ರದೇಶದಲ್ಲಿರುವ ಶ್ರೀನಿಧಿ ಭಾರತ್ ಗ್ಯಾಸ್ ಸಂಸ್ಥೆಯ ಅಡುಗೆ ಅನಿಲ ಸಿಲಿಂಡರ್ಗಳ ಗೋದಾಮನ್ನು ಪಟ್ಟಣದ ಹೊರವಲಯದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆಯಂತಹ ಪ್ರಕರಣಗಳು ಸಂಭವಿಸಿದ ನಂತರ ಕ್ರಮ ಕೈಗೊಳ್ಳುವುದಕ್ಕಿಂತ, ಅವುಗಳನ್ನು ಮುಂಚಿತವಾಗಿಯೇ ಗುರುತಿಸಿ ತಡೆಗಟ್ಟುವುದು ಅತ್ಯಂತ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್ ಹೇಳಿದರು.
ತಾಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಬೇಸಿಗೆ ಅವಧಿಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಗ್ರಾಮದ ಕುಡಿಯುವ ನೀರಿನ ಕೆರೆಯನ್ನು ಕಾಲುವೆ ನೀರಿನಿಂದ ಭರ್ತಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹಮ್ಮದ್ ತಿಳಿಸಿದರು.
ಮಕ್ಕಳು ಅಪರಿಚಿತ ವ್ಯಕ್ತಿಗಳಿಂದ ಯಾವುದೇ ರೀತಿಯ ಕಿರುಕುಳ, ಮಾನಸಿಕ ಹಿಂಸೆ ಅಥವಾ ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಭಯಪಡದೆ ತಕ್ಷಣ ಪಾಲಕರು, ಶಿಕ್ಷಕರು ಅಥವಾ ಶಾಲೆಯ ಮುಖ್ಯಗುರುಗಳಿಗೆ ಮಾಹಿತಿ ನೀಡಬೇಕು.
ಮಾನ್ವಿ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಲ್ಲಿ ಗ್ರಾಮಾಭಿವೃದ್ಧಿ ಸಮಿತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮಸ್ಥರು ಸಂಘಟಿತರಾಗಿ ತಮ್ಮ ಊರಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕೆ ಮುಂದಾದಾಗ ಮಾತ್ರ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಕ್ಷೇತ್ರಾಧಿಕಾರಿ ಫಾ.
ರಾಯಚೂರು ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯ ವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ಬಾಪೂರು ನರಸಿಂಹ ಶ್ರೇಷ್ಠಿ ಅವರ ಸಾವಿಗೆ ಸಂತಾಪ ಸೂಚಿಸಿ, ಶ್ರೀ ನಗರೇಶ್ವರ ಆರ್ಯ ವೈಶ್ಯ ಸಂಘದ ವತಿಯಿಂದ ಪಟ್ಟಣದ ಬಸವ ವೃತ್ತದಲ್ಲಿ ಮೇಣದಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸವ ವೃತ್ತದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ತಾಲೂಕಿನ ನಂದಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರಗಾಲದ ಪರಿಣಾಮ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನರು ಹಾಗೂ ಜಾನುವಾರುಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಗೋಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ್ ಹಳ್ಳಕ್ಕೆ ತಕ್ಷಣ ನೀರು ಹರಿಸಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ತಾಲೂಕಿನ ಜಾನೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಸ್ಥಳಾವಕಾಶ ಕಲ್ಪಿಸುವುದರ ಜೊತೆಗೆ ಗ್ರಾಮದಲ್ಲಿನ ವಸತಿರಹಿತ ಕುಟುಂಬಗಳಿಗೆ ನಿವೇಶನಗಳನ್ನು ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಆದಾಯ ಮಿತಿಗೆ ಸಂಬಂಧಿಸಿದ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿರುವ ವೃದ್ಧಾಪ್ಯ ವೇತನವನ್ನು ಅರ್ಹ ಫಲಾನುಭವಿಗಳಿಗೆ ಪುನರಾರಂಭಿಸುವ ನಿಟ್ಟಿನಲ್ಲಿ ಪರಿಶೀಲನಾ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಮಾನ್ವಿ ತಾಲೂಕಿನಲ್ಲಿ ಇದುವರೆಗೆ 11,513 ಫಲಾನುಭವಿಗಳ ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ…