ಪೆಟ್ರೋಲ್ ಬಂಕ್ನಲ್ಲಿ ಅಗ್ನಿ ಅವಘಡ: ಬೆಂಕಿಗೆ ಆಹುತಿಯಾದ ಪಲ್ಸರ್ ಬೈಕ್
ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಮಂಗಳವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪಲ್ಸರ್ 220 ಬೈಕ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 168 ಸುದ್ದಿಗಳಲ್ಲಿ 51–75 ಸುದ್ದಿಗಳು
ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಮಂಗಳವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪಲ್ಸರ್ 220 ಬೈಕ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಮುಂದೆ ಓದಿ →
ಪಟ್ಟಣದ ಶ್ರೀ ಜೈ ಸಂತೋಷಿ ಮಾತಾ ದೇವಸ್ಥಾನದ 27ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಥೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ಜರುಗಿತು.
ಮುಂದೆ ಓದಿ →
ತಾಲೂಕಿನ ನಂದಿಹಾಳ ಹಳ್ಳದ ವ್ಯಾಪ್ತಿಯ ಗ್ರಾಮಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಗೋಲದಿನ್ನಿ ಎಸ್ಕೇಪ್ ಕಾಲುವೆ ಮೂಲಕ ಹಳ್ಳಕ್ಕೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ಗೋಲದಿನ್ನಿ ಎಸ್ಕೇಪ್ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.
ಮುಂದೆ ಓದಿ →
ಕಳೆದ 10 ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಪಟ್ಟಣದ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಮುಂದೆ ಓದಿ →
ಪಟ್ಟಣದ ಲೊಯೋಲಾ ಸಮಾಜ ಸೇವಾ ಕೇಂದ್ರದ ವತಿಯಿಂದ ಗ್ರಾಮೀಣ ಕಲಿಕಾ ಕೇಂದ್ರಗಳ ಮಕ್ಕಳಿಗೆ ಮಕ್ಕಳ ಸಂಸತ್ ರಚನೆ ಕುರಿತು ಕಾರ್ಯಾಗಾರ ಹಾಗೂ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.
ಮುಂದೆ ಓದಿ →
ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಮುಂದೆ ಓದಿ →
ಪಟ್ಟಣದ ಯಂಕಪ್ಪ ತಾತನ ಮಠದ ನಮಾಜಗೇರಿಗುಡ್ಡದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕವನ್ನು ಉದ್ಘಾಟಿಸಿದರು.
ಮುಂದೆ ಓದಿ →
ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಮಾನವ ಸಮಾಜಕ್ಕೆ ಸತ್ಯ, ಧರ್ಮ, ನ್ಯಾಯ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಪರಿಚಯಿಸಿದ್ದು, ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ತಹಶೀಲ್ದಾರ್ ಭೀಮರಾಯ ಬಿ.
ಮುಂದೆ ಓದಿ →
ತಾಲೂಕಿನ ಪೋತ್ನಾಳ್ ಗ್ರಾಮದ ಸಮೀಪದ ಹೆದ್ದಾರಿಯಲ್ಲಿ ವಾಹನ ಅಪಘಾತಕ್ಕೆ ಸಿಲುಕಿ ಕೃಷ್ಣಮೃಗವೊಂದು ಮೃತಪಟ್ಟಿದ್ದು, ವನ್ಯಜೀವಿಗಳ ಸಂಚಾರ ಹೆಚ್ಚಿರುವ ರಸ್ತೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಮುಂದೆ ಓದಿ →
ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಆರೋಗ್ಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಬಡವರು ಹಾಗೂ ಸಾಮಾನ್ಯ ಜನರಿಗೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮುಂದೆ ಓದಿ →
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಆಗ್ರಹಿಸಿ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಸಂವಿಧಾನ ನಡಿಗೆ ಜಾಗೃತಿ ಜಾಥಾ ನಡೆಸಲಾಯಿತು.
ಮುಂದೆ ಓದಿ →
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಹಾಸನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಶ್ರವಣಬೆಳಗೊಳದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಬ್ ಬುಲ್ಬುಲ್ ಉತ್ಸವದಲ್ಲಿ ಮಾನ್ವಿ ಪಟ್ಟಣದ ಕಾಕತೀಯ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳು ಹಾಗೂ ದೈಹಿಕ ಕಸರತ್ತುಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆ ಮತ್ತು…
ಮುಂದೆ ಓದಿ →
ತಾಲೂಕಿನ ಹರನಹಳ್ಳಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಮಹಾಮಂಗಲೋತ್ಸವವು ಧಾರ್ಮಿಕ ಕಾರ್ಯಕ್ರಮಗಳು, ದೇವಿಯ ಭಾವಚಿತ್ರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಸಂಭ್ರಮದಿಂದ ನೆರವೇರಿತು.
ಮುಂದೆ ಓದಿ →
ಪಟ್ಟಣದ ಪ್ರಸಿದ್ಧ ಶ್ರೀ ಕಲ್ಮಠದಲ್ಲಿ ಬುಧವಾರ ವಿಜಯದಶಮಿ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಮುಂದೆ ಓದಿ →
ತಾಲೂಕಿನ ಕುರ್ಡಿ ಗ್ರಾಮದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಶ್ರೀ ದ್ಯಾವಮವ್ವ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮುಂದೆ ಓದಿ →
ಮಾನ್ವಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀಜಗದ್ಗುರು ಮಧ್ವಾಚಾರ್ಯರ ಜಯಂತಿ ಆಚರಿಸಲಾಯಿತು. ಮಹನೀಯರ ಜೀವನ ಚರಿತ್ರೆ, ತತ್ವಾದರ್ಶಗಳು ಹಾಗೂ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಜಯಂತಿಗಳ ಆಚರಣೆಯ ಉದ್ದೇಶವಾಗಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.
ಮುಂದೆ ಓದಿ →
ತಾಲೂಕಿನ ಹಿರೇಕೋಟ್ನೇಕಲ್ ಗ್ರಾಮದ ಶ್ರೀ ತಾಯಮ್ಮ ದೇವಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಕಾರ್ಯಕ್ರಮದಲ್ಲಿ ನೂತನ ಪುರಾಣ ಮಂಟಪ ನಿರ್ಮಾಣಕ್ಕೆ ಕೊಡುಗೆ ನೀಡಿದ ಹಿರಿಯ ವಕೀಲ ಸಿದ್ದಲಿಂಗಪ್ಪ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಮುಂದೆ ಓದಿ →
ಚಾಮರಾಜನಗರದಲ್ಲಿ ಅಕ್ಟೋಬರ್ 24 ಮತ್ತು 25ರಂದು ಅಂತರರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ನಡೆಯಲಿದೆ. ಮಾನ್ವಿ ತಾಲೂಕಿನ ಬೌದ್ಧ ಧರ್ಮದ ಅನುಯಾಯಿಗಳು, ಅಂಬೇಡ್ಕರ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಕೀಲ ತಿಪ್ಪಣ್ಣ ಬಾಗಲವಾಡ ಮನವಿ ಮಾಡಿದ್ದಾರೆ.
ಮುಂದೆ ಓದಿ →
ಮಳೆ ಕೊರತೆಯಿಂದ ಕೃಷಿಯಲ್ಲಿ ನಿರೀಕ್ಷಿತ ಬೆಳೆ ಬಾರದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಯುವ ರೈತರೊಬ್ಬರು ಸಾಲದ ಹೊರೆಯಿಂದ ಮನನೊಂದು ವಿಷ ಸೇವಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ನಡೆದಿದೆ.
ಮುಂದೆ ಓದಿ →
ಮಾನ್ವಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಅಕ್ಟೋಬರ್ 26ರಂದು ಶ್ರೀ ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ತಿಳಿಸಿದ್ದಾರೆ.
ಮುಂದೆ ಓದಿ →
ಮಾನ್ವಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ದೀಕ್ಷಾಭೂಮಿ ಯಾತ್ರೆಯ ಬಸ್ಗೆ ತಾಲೂಕು ಸಹಾಯಕ ನಿರ್ದೇಶಕಿ ಸಾಹಿರಬಾನು ನದಾಫ್ ಚಾಲನೆ ನೀಡಿದರು.
ಮುಂದೆ ಓದಿ →
ಪಟ್ಟಣದ ಪ್ರಸಿದ್ಧ ಶ್ರೀ ಕಲ್ಮಠದಲ್ಲಿ 51ನೇ ವರ್ಷದ ದಸರಾ ಮಹೋತ್ಸವದ ಅಂಗವಾಗಿ ಸೋಮವಾರ ಲೋಕಕಲ್ಯಾಣ ಹಾಗೂ ನಾಡಿನ ಸುಖಶಾಂತಿ, ಸಮೃದ್ಧಿಗಾಗಿ ಶ್ರೀ ಚಂಡಿಕಾ ಹೋಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರ ಮಾಜಿ ಸಚಿವ ಎನ್.ಎಸ್.
ಮುಂದೆ ಓದಿ →
ತಾಲೂಕಿನ ಗೊಲ್ಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ ಹಳ್ಳಕ್ಕೆ ನೀರು ಹರಿಸಿ ಜನರು ಹಾಗೂ ಜಾನುವಾರುಗಳಿಗೆ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿ ವಿವಿಧ ಗ್ರಾಮಗಳ ರೈತರು ಮತ್ತು ಗ್ರಾಮಸ್ಥರು ನಂದಿಹಾಳ ಗ್ರಾಮದ ಸಮೀಪದ ರಾಜ್ಯ…
ಮುಂದೆ ಓದಿ →
ತಾಲೂಕಿನ ಕಪ್ಪಗಲ್ ಗ್ರಾಮದ ಸಮೀಪ ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗಿಗೆ ಉರುಳಿಬಿದ್ದ ಘಟನೆ ನಡೆದಿದೆ.
ಮುಂದೆ ಓದಿ →