ರಾಯಚೂರು, ನ.12: ನ್ಯುಮೋನಿಯಾ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ರೋಗದ ತಡೆಗಟ್ಟುವಿಕೆ, ಆರಂಭಿಕ ಹಂತದಲ್ಲಿಯೇ ಪತ್ತೆ ಹಾಗೂ ಸೂಕ್ತ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಕ್ಕಳಿಗೆ ಆರೋಗ್ಯವಂತ ಬಾಲ್ಯ ಒದಗಿಸಬೇಕು ಎಂದು ಎಲ್‌ಬಿಎಸ್ ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನವೆಂಬರ್ 14 ಮತ್ತು 15ರಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ 12ನೇ ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಸಾಹಿತಿಗಳು, ಸಾಹಿತ್ಯಾಸಕ್ತರು ಹಾಗೂ…
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್.
ರಾಯಚೂರು, ನ.11: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ವಿಶ್ವವಿದ್ಯಾಲಯದ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರುವುದರ ಜೊತೆಗೆ ಪರೀಕ್ಷಾ ಕಾರ್ಯಗಳನ್ನು ತ್ವರಿತವಾಗಿ ಹಾಗೂ ಗುಣಮಟ್ಟದಿಂದ ನಿರ್ವಹಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಮೌಲ್ಯಮಾಪನ ಕುಲಸಚಿವ ಡಾ.
ಶಿಲ್ಪಕಲಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಗಮಕುಂಟ ಗ್ರಾಮದ ಶಿಲ್ಪಕಲಾವಿದ ಉರುಕುಂದಪ್ಪ ಬಡಿಗೇರ್ ಅವರನ್ನು ಗ್ರಾಮಸ್ಥರು ಅಭಿನಂದಿಸಿ ಗೌರವಿಸಿದರು.
ಆದಿವಾಸಿ ಸಮುದಾಯಗಳ ಐತಿಹಾಸಿಕ ಹೋರಾಟ, ಸಾಂಸ್ಕೃತಿಕ ಪರಂಪರೆ ಹಾಗೂ ದೇಶದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಜನಜಾತಿಯ ಗೌರವ ದಿವಸದ ಅಂಗವಾಗಿ ನವೆಂಬರ್ 14ರಂದು ನಗರದ ಪ್ರಮುಖ ವೃತ್ತಗಳಲ್ಲಿ ದೀಪ ಬೆಳಗಿಸುವ ಹಾಗೂ ಸ್ವಚ್ಛತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ…
ಮಕ್ಕಳನ್ನು ಸಾಂಕ್ರಾಮಿಕ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ರಕ್ಷಿಸಲು ನಿಗದಿತ ವೇಳಾಪಟ್ಟಿಯಂತೆ ಲಸಿಕೆಗಳನ್ನು ಹಾಕಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮಟಮಾರಿ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ಹೇಳಿದರು.
ನಗರದ ಹೊರವಲಯದ ವಾರ್ಡ್ ಸಂಖ್ಯೆ 33ರ ಯರಮರಸ್ ಹಳೆ ಗ್ರಾಮದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯಕ್ಕೆ ಸಮರ್ಪಕ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತಾ ಸಿಬ್ಬಂದಿ ಇಲ್ಲದ ಕಾರಣ ಕಟ್ಟಡ ಸಾರ್ವಜನಿಕರ ಬಳಕೆಗೆ ಬಾರದೆ ನಿರುಪಯುಕ್ತವಾಗಿದೆ ಎಂದು ಮಾಜಿ ನಗರಸಭೆ ಸದಸ್ಯ ಶಂಶಾಲಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ (DAY-NRLM) ಅಕ್ಕ ಕೆಫೆಗಳ ಸ್ಥಾಪನೆ ಮತ್ತು ಅನುಷ್ಠಾನದಲ್ಲಿ ರಾಯಚೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಸಾಧನೆಗಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರಿಗೆ ರಾಜ್ಯಮಟ್ಟದ ಪ್ರಶಂಸೆ ವ್ಯಕ್ತವಾಗಿದೆ.
ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಉಲ್ಲಂಘಿಸಿದ ಪ್ರಕರಣದಲ್ಲಿ ದೇವದುರ್ಗ ಪಟ್ಟಣದ ನಿವಾಸಿಯೊಬ್ಬರಿಗೆ ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ದೇವದುರ್ಗದ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಐಪಿಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಶಿಕ್ಷಣ, ರಸ್ತೆ ಸಂಪರ್ಕ, ಕುಡಿಯುವ ನೀರು ಹಾಗೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ರಾಯಚೂರು, ನ.11: ಆಧುನಿಕ ರಸಾಯನಶಾಸ್ತ್ರದಲ್ಲಿ ಅಣುಗಳ ರಚನೆ, ವಸ್ತುಗಳ ಗುಣಲಕ್ಷಣ ಹಾಗೂ ಅವುಗಳ ಸಂಯೋಜನೆಯನ್ನು ಗುರುತಿಸುವಲ್ಲಿ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ಲತಾ ಎಂ.ಎಸ್. ಹೇಳಿದರು.
ಹಾಲು, ಮೊಸರು, ತುಪ್ಪ ಹಾಗೂ ಸಾರಿಗೆ ಬಸ್‌ಗಳ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರ ಜೀವನ ನಿರ್ವಹಣೆ ದುಸ್ತರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಎಲ್‌ವಿಡಿ ಕಾಲೇಜು ಹಾಗೂ ಕೆಎಸ್‌ಸಿಎ ಕ್ರಿಕೆಟ್ ಮೈದಾನಗಳಲ್ಲಿ ಆರಂಭವಾದ 14 ವರ್ಷದೊಳಗಿನವರ (ಅಂಡರ್-14) ಅಂತರ ಜಿಲ್ಲಾ ಕ್ರಿಕೆಟ್ ಪಂದ್ಯಾವಳಿಯ 'ಬಿ' ಗುಂಪಿನ ಪಂದ್ಯಗಳಲ್ಲಿ ವಿಜಯಪುರ ಹಾಗೂ ಕೊಪ್ಪಳ ತಂಡಗಳು ಗೆಲುವು ಸಾಧಿಸಿವೆ.
ವೀರವನಿತೆ ಒನಕೆ ಓಬವ್ವ ಅವರ ಕಾಯಕನಿಷ್ಠೆ, ಧೈರ್ಯ, ಸಾಹಸ ಹಾಗೂ ದೇಶಪ್ರೇಮ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾಗಿದ್ದು, ವಿದ್ಯಾರ್ಥಿನಿಯರು ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.
ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಷಿಣಗಿ ಗ್ರಾಮದ ಪರಿಶಿಷ್ಟ ಜಾತಿ ಓಣಿಯಲ್ಲಿ ಕಳೆದ 30ರಿಂದ 35 ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಇತಿಹಾಸದ ಪುಟಗಳಲ್ಲಿ ಸಾಹಸ, ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ವೀರರಾಣಿ ಒನಕೆ ಓಬವ್ವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕವಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರು ಹೇಳಿದರು.
ಸರಿಯಾಗಿ ಓದಲು ಬರುತ್ತಿಲ್ಲ ಎಂಬ ಕಾರಣಕ್ಕೆ 10 ವರ್ಷದ ಬಾಲಕನ ಬಾಯಿಗೆ ಬಟ್ಟೆ ತುರುಕಿ, ಕಟ್ಟಿಗೆಯಿಂದ ಕಣ್ಣು, ತಲೆ, ಬೆನ್ನು ಹಾಗೂ ಕೈಕಾಲುಗಳಿಗೆ ಮನಬಂದಂತೆ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ಫಾಜ್ ಶಾಲೆಯಲ್ಲಿ ಕೇಳಿಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಕರ ರೀತಿಯಲ್ಲಿ ವರ್ತಿಸಿದ್ದಲ್ಲದೆ, ರೌಡಿಶೀಟರ್ ಹಾಗೂ ವಂಚನೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಯಚೂರು ಜಿಲ್ಲಾ ಹತ್ತಿ ಬೆಳೆಗಾರರ ರೈತರ ಹೋರಾಟ ಸಮಿತಿ ಅಧ್ಯಕ್ಷ ಪಿ.ಎಸ್.
ತಾಲೂಕಿನ ಇಡಪನೂರು ಗ್ರಾಮದಿಂದ ಮೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ₹70 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿರುವ ಇಡಪನೂರು ಗ್ರಾಮದ ನಿವಾಸಿ ಯೋಹಾನ್, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ…
ರಾಯಚೂರು, ನ. 10: ವಿದೇಶಿ ಸಂಸ್ಕೃತಿಯ ಪ್ರಭಾವದಿಂದ ನಮ್ಮ ನಾಡಿನ ಸಂಸ್ಕೃತಿ ಹಾಗೂ ಪರಂಪರೆಯ ಕಲೆಗಳು ಮರೆಯಾಗುತ್ತಿವೆ. ಮುಂದಿನ ಯುವ ಪೀಳಿಗೆಗೆ ನಾಡಿನ ಸೊಗಡನ್ನು ಪರಿಚಯಿಸುವ ದೇಸಿ ಕಲೆಗಳನ್ನು ಉಳಿಸಿ ಬೆಳೆಸುವುದು ಅಗತ್ಯವಾಗಿದೆ.
ನೂತನ ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಿರುವ ಫಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ, ಫಲಕನಮರಡಿ, ಮೂಡಲಗುಂಡ, ಮದರಕಲ್, ದೇವರಗುಡ್ಡ ಹಾಗೂ ಊಟಿ ಗ್ರಾಮಗಳನ್ನು ಪುನಃ ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಿ, ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ನವೆಂಬರ್ 6ರಂದು ಜಿಲ್ಲಾಧಿಕಾರಿಗಳಿಗೆ…
ನಗರದ ಬೃಹಸ್ಪತಿವಾರಪೇಟೆ ಹಾಗೂ ಮಕ್ತಲಪೇಟೆ ಮಧ್ಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಶಾಂಭವಿ ಚಕ್ಲಿ ಕೇಂದ್ರದಲ್ಲಿ ಮೂರನೇ ವರ್ಷದ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.