ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,122 ಇಂದಿನ ಓದುಗರು: 8 🟢 ಈಗ ಆನ್‌ಲೈನ್: 2
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 637 ಸುದ್ದಿಗಳಲ್ಲಿ 1–25 ಸುದ್ದಿಗಳು

ರಾಯಚೂರು

ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘನೆ: ಆರೋಪಿಗೆ 6 ತಿಂಗಳ ಜೈಲು ಶಿಕ್ಷೆ, ₹20 ಸಾವಿರ ದಂಡ

ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಉಲ್ಲಂಘಿಸಿದ ಪ್ರಕರಣದಲ್ಲಿ ದೇವದುರ್ಗ ಪಟ್ಟಣದ ನಿವಾಸಿಯೊಬ್ಬರಿಗೆ ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ದೇವದುರ್ಗದ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಐಪಿಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ಬಸನಗೌಡ ದದ್ದಲ್, ರಸ್ತೆ, ಶಾಲಾ ಕೊಠಡಿ, ಸಮುದಾಯ ಭವನ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ

ಗ್ರಾಮೀಣ ಪ್ರದೇಶಗಳ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಶಿಕ್ಷಣ, ರಸ್ತೆ ಸಂಪರ್ಕ, ಕುಡಿಯುವ ನೀರು ಹಾಗೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.

ಮುಂದೆ ಓದಿ →
ರಾಯಚೂರು

ಆಧುನಿಕ ರಸಾಯನಶಾಸ್ತ್ರದಲ್ಲಿ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳ ಪಾತ್ರ ಮಹತ್ವದ್ದು: ಡಾ. ಲತಾ ಎಂ.ಎಸ್.

ರಾಯಚೂರು, ನ.11: ಆಧುನಿಕ ರಸಾಯನಶಾಸ್ತ್ರದಲ್ಲಿ ಅಣುಗಳ ರಚನೆ, ವಸ್ತುಗಳ ಗುಣಲಕ್ಷಣ ಹಾಗೂ ಅವುಗಳ ಸಂಯೋಜನೆಯನ್ನು ಗುರುತಿಸುವಲ್ಲಿ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ಲತಾ ಎಂ.ಎಸ್. ಹೇಳಿದರು.

ಮುಂದೆ ಓದಿ →
ರಾಯಚೂರು

ಹಾಲು, ಮೊಸರು, ತುಪ್ಪ ಹಾಗೂ ಬಸ್ ದರ ಏರಿಕೆ ಖಂಡಿಸಿ ಸಿಪಿಐಎಂ ಪ್ರತಿಭಟನೆ

ಹಾಲು, ಮೊಸರು, ತುಪ್ಪ ಹಾಗೂ ಸಾರಿಗೆ ಬಸ್‌ಗಳ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರ ಜೀವನ ನಿರ್ವಹಣೆ ದುಸ್ತರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು

ಅಂಡರ್-14 ಅಂತರ ಜಿಲ್ಲಾ ಕ್ರಿಕೆಟ್ ಪಂದ್ಯಾವಳಿ: ವಿಜಯಪುರ, ಕೊಪ್ಪಳ ತಂಡಗಳಿಗೆ ಜಯ

ನಗರದ ಎಲ್‌ವಿಡಿ ಕಾಲೇಜು ಹಾಗೂ ಕೆಎಸ್‌ಸಿಎ ಕ್ರಿಕೆಟ್ ಮೈದಾನಗಳಲ್ಲಿ ಆರಂಭವಾದ 14 ವರ್ಷದೊಳಗಿನವರ (ಅಂಡರ್-14) ಅಂತರ ಜಿಲ್ಲಾ ಕ್ರಿಕೆಟ್ ಪಂದ್ಯಾವಳಿಯ 'ಬಿ' ಗುಂಪಿನ ಪಂದ್ಯಗಳಲ್ಲಿ ವಿಜಯಪುರ ಹಾಗೂ ಕೊಪ್ಪಳ ತಂಡಗಳು ಗೆಲುವು ಸಾಧಿಸಿವೆ.

ಮುಂದೆ ಓದಿ →
ರಾಯಚೂರು

ಒನಕೆ ಓಬವ್ವ ಅವರ ಧೈರ್ಯ, ಸಾಹಸ ಮಹಿಳೆಯರಿಗೆ ಆದರ್ಶ: ವೆಂಕಟೇಶ ದೊಡ್ಡಮನಿ

ವೀರವನಿತೆ ಒನಕೆ ಓಬವ್ವ ಅವರ ಕಾಯಕನಿಷ್ಠೆ, ಧೈರ್ಯ, ಸಾಹಸ ಹಾಗೂ ದೇಶಪ್ರೇಮ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾಗಿದ್ದು, ವಿದ್ಯಾರ್ಥಿನಿಯರು ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.

ಮುಂದೆ ಓದಿ →
ರಾಯಚೂರು

ಅರಷಿಣಗಿ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ: ಶಾಶ್ವತ ಪರಿಹಾರಕ್ಕೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಷಿಣಗಿ ಗ್ರಾಮದ ಪರಿಶಿಷ್ಟ ಜಾತಿ ಓಣಿಯಲ್ಲಿ ಕಳೆದ 30ರಿಂದ 35 ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಓಬವ್ವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು

ಇತಿಹಾಸದ ಪುಟಗಳಲ್ಲಿ ಸಾಹಸ, ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ವೀರರಾಣಿ ಒನಕೆ ಓಬವ್ವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕವಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರು ಹೇಳಿದರು.

ಮುಂದೆ ಓದಿ →
ರಾಯಚೂರು

10 ವರ್ಷದ ಬಾಲಕನ ಬಾಯಿಗೆ ಬಟ್ಟೆ ತುರುಕಿ ಅಮಾನುಷ ಹಲ್ಲೆ: ಆರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲು

ಸರಿಯಾಗಿ ಓದಲು ಬರುತ್ತಿಲ್ಲ ಎಂಬ ಕಾರಣಕ್ಕೆ 10 ವರ್ಷದ ಬಾಲಕನ ಬಾಯಿಗೆ ಬಟ್ಟೆ ತುರುಕಿ, ಕಟ್ಟಿಗೆಯಿಂದ ಕಣ್ಣು, ತಲೆ, ಬೆನ್ನು ಹಾಗೂ ಕೈಕಾಲುಗಳಿಗೆ ಮನಬಂದಂತೆ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ಫಾಜ್ ಶಾಲೆಯಲ್ಲಿ ಕೇಳಿಬಂದಿದೆ.

ಮುಂದೆ ಓದಿ →
ರಾಯಚೂರು

ಎಸ್ಪಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ: ವರ್ಗಾವಣೆಗೆ ಚಿನ್ನಯ್ಯ ನಾಯಕ ಆಗ್ರಹ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಕರ ರೀತಿಯಲ್ಲಿ ವರ್ತಿಸಿದ್ದಲ್ಲದೆ, ರೌಡಿಶೀಟರ್ ಹಾಗೂ ವಂಚನೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಯಚೂರು ಜಿಲ್ಲಾ ಹತ್ತಿ ಬೆಳೆಗಾರರ ರೈತರ ಹೋರಾಟ ಸಮಿತಿ ಅಧ್ಯಕ್ಷ ಪಿ.ಎಸ್.

ಮುಂದೆ ಓದಿ →
ರಾಯಚೂರು

ಇಡಪನೂರು–ಮೀರಾಪುರ ರಸ್ತೆ ಸೇತುವೆ ಕಾಮಗಾರಿಯಲ್ಲಿ ಕಳಪೆ ಆರೋಪ: ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ

ತಾಲೂಕಿನ ಇಡಪನೂರು ಗ್ರಾಮದಿಂದ ಮೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ₹70 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿರುವ ಇಡಪನೂರು ಗ್ರಾಮದ ನಿವಾಸಿ ಯೋಹಾನ್, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ…

ಮುಂದೆ ಓದಿ →
ರಾಯಚೂರು

ನಾಡಿನ ಸೊಗಡನ್ನು ಬಿಂಬಿಸುವ ದೇಸಿ ಕಲೆಗಳ ಸಂರಕ್ಷಣೆ ಅಗತ್ಯ: ಶ್ರೀದೇವಿ ನಾಯಕ

ರಾಯಚೂರು, ನ. 10: ವಿದೇಶಿ ಸಂಸ್ಕೃತಿಯ ಪ್ರಭಾವದಿಂದ ನಮ್ಮ ನಾಡಿನ ಸಂಸ್ಕೃತಿ ಹಾಗೂ ಪರಂಪರೆಯ ಕಲೆಗಳು ಮರೆಯಾಗುತ್ತಿವೆ. ಮುಂದಿನ ಯುವ ಪೀಳಿಗೆಗೆ ನಾಡಿನ ಸೊಗಡನ್ನು ಪರಿಚಯಿಸುವ ದೇಸಿ ಕಲೆಗಳನ್ನು ಉಳಿಸಿ ಬೆಳೆಸುವುದು ಅಗತ್ಯವಾಗಿದೆ.

ಮುಂದೆ ಓದಿ →
ರಾಯಚೂರು

ಅರಕೇರಾ ತಾಲೂಕಿಗೆ ಸೇರ್ಪಡೆಗೊಂಡ ಆರು ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಲು ಆಗ್ರಹ

ನೂತನ ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಿರುವ ಫಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ, ಫಲಕನಮರಡಿ, ಮೂಡಲಗುಂಡ, ಮದರಕಲ್, ದೇವರಗುಡ್ಡ ಹಾಗೂ ಊಟಿ ಗ್ರಾಮಗಳನ್ನು ಪುನಃ ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಿ, ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ನವೆಂಬರ್ 6ರಂದು ಜಿಲ್ಲಾಧಿಕಾರಿಗಳಿಗೆ…

ಮುಂದೆ ಓದಿ →
ರಾಯಚೂರು

ಶಾಂಭವಿ ಚಕ್ಲಿ ಕೇಂದ್ರದಲ್ಲಿ ದೀಪಾವಳಿ ಲಕ್ಷ್ಮೀ ಪೂಜೆ: ಉದ್ಯಮದ ಅಭಿವೃದ್ಧಿಗೆ ಶ್ರೀಗಳ ಆಶೀರ್ವಾದ

ನಗರದ ಬೃಹಸ್ಪತಿವಾರಪೇಟೆ ಹಾಗೂ ಮಕ್ತಲಪೇಟೆ ಮಧ್ಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಶಾಂಭವಿ ಚಕ್ಲಿ ಕೇಂದ್ರದಲ್ಲಿ ಮೂರನೇ ವರ್ಷದ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು

ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್ ಜಾವೀದ್ ಉಲ್ ಹಕ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ 12.15ಕ್ಕೆ ನಿಧನರಾದರು.

ಮುಂದೆ ಓದಿ →
ರಾಯಚೂರು

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯನಿರ್ವಾಹಕ ಸಮಿತಿಯ ಖಾಯಂ ಆಹ್ವಾನಿತರಾಗಿ ರೇವಣಸಿದ್ದಪ್ಪ ಗರಡಿ ನೇಮಕ

ಅಖಿಲ ಭಾರತ ವೀರಶೈವ ಮಹಾಸಭಾದ ರಾಯಚೂರು ಜಿಲ್ಲಾ ಕಾರ್ಯನಿರ್ವಾಹಕ ಸಮಿತಿಯ ಖಾಯಂ ಆಹ್ವಾನಿತರನ್ನಾಗಿ ರೇವಣಸಿದ್ದಪ್ಪ ಗರಡಿ ಅವರನ್ನು ನೇಮಕ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಮಿರ್ಜಾಪುರ ಆದೇಶ ಹೊರಡಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಚಂದ್ರಬಂಡಾದಲ್ಲಿ ನ.10ರಿಂದ ಶ್ರೀ ಬಂಡೆ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವ: ಬಂಡೆ ಕಲ್ಲು ಎಳೆಯುವ ಎತ್ತುಗಳ ಸ್ಪರ್ಧೆ

ತಾಲೂಕಿನ ಚಂದ್ರಬಂಡಾ ಗ್ರಾಮದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಬಂಡೆ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ನವೆಂಬರ್ 10ರಿಂದ 12ರವರೆಗೆ ಮೂರು ದಿನಗಳ ಕಾಲ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು

ಯರಮರಸ್ ಗ್ರಾಮದ ಮಲ್ಲಮ್ಮ ಗೌಡಸಾನಿ ಮಾಲಿಪಾಟೀಲ್ ನಿಧನ

ತಾಲೂಕಿನ ಯರಮರಸ್ ಗ್ರಾಮದ ನಿವಾಸಿ, ಹಿರಿಯರಾದ ಮಲ್ಲಮ್ಮ ಗೌಡಸಾನಿ ಮಾಲಿಪಾಟೀಲ್ (75) ಅವರು ವಯೋಸಹಜ ಅನಾರೋಗ್ಯದಿಂದ ಸೋಮವಾರ ಬೆಳಗಿನ ಜಾವ ನಿಧನರಾದರು.

ಮುಂದೆ ಓದಿ →
ರಾಯಚೂರು

ದೇವಸೂಗೂರು ಹೋಬಳಿ ಅಂಬೇಡ್ಕರ್ ಸೇವಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ತಾಲೂಕಿನ ದೇವಸೂಗೂರು ಹೋಬಳಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ನವೆಂಬರ್ 7ರಂದು ಶಕ್ತಿನಗರದ ಕೃಷ್ಣ ಅತಿಥಿ ಗೃಹದಲ್ಲಿ ನಡೆಯಿತು.

ಮುಂದೆ ಓದಿ →
ರಾಯಚೂರು

ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಿಸಿ: ಜುಬಿನ್ ಮೊಹಪಾತ್ರ

ಗಾಂಜಾ, ತಂಬಾಕು, ಮದ್ಯಪಾನ ಸೇರಿದಂತೆ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದಲ್ಲದೆ, ಕುಟುಂಬದ ನೆಮ್ಮದಿ ಮತ್ತು ಆರ್ಥಿಕ ಸ್ಥಿರತೆಯೂ ಹಾಳಾಗುತ್ತದೆ.

ಮುಂದೆ ಓದಿ →
ರಾಯಚೂರು

ನ.14, 15ರಂದು ಯುಜಿಸಿ ನೆಟ್ ಪರೀಕ್ಷೆಗೆ ವಿಶೇಷ ತರಬೇತಿ ಕಾರ್ಯಾಗಾರ

ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ ನೆಟ್)ಗೆ ಸಿದ್ಧತೆ ನಡೆಸುತ್ತಿರುವ ಸ್ನಾತಕೋತ್ತರ ಪದವೀಧರರು ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಮುಂದುವರಿಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಅಶ್ವಮೇಧ ಫೌಂಡೇಶನ್ ವತಿಯಿಂದ ನವೆಂಬರ್ 14 ಮತ್ತು 15ರಂದು ಎರಡು ದಿನಗಳ…

ಮುಂದೆ ಓದಿ →
ರಾಯಚೂರು

12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರಾಮಣ್ಣ ಹವಳೆ ಅವರಿಗೆ ಗೌರವ ಸನ್ಮಾನ

ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ, ಲೇಖಕ, ಸಂಶೋಧಕ ಹಾಗೂ ನಾಟಕಕಾರ ರಾಮಣ್ಣ ಹವಳೆ ಅವರನ್ನು ಸಾಹಿತ್ಯಾಭಿಮಾನಿಗಳು, ಶಿಕ್ಷಕರು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.

ಮುಂದೆ ಓದಿ →
ರಾಯಚೂರು

ಭೋವಿ ಅಭಿವೃದ್ಧಿ ನಿಗಮದಲ್ಲಿ ₹19 ಕೋಟಿ ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಡಿ ರಾಯಚೂರು ಜಿಲ್ಲೆಯ ಮಾನ್ವಿ, ಸಿರವಾರ ಹಾಗೂ ಸಿಂಧನೂರು ತಾಲೂಕುಗಳಲ್ಲಿ ಸುಮಾರು ₹19 ಕೋಟಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ಭೋವಿ-ವಡ್ಡರ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಬಿ.ಕೆ.

ಮುಂದೆ ಓದಿ →
ರಾಯಚೂರು

ಅರಕೇರಾದಲ್ಲಿ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ: ಸರಕಾರಿ ಸೌಲಭ್ಯಗಳ ಸದ್ಬಳಕೆಗೆ ಜಿಲ್ಲಾಧಿಕಾರಿ ಪೂವಿತಾ ಎಸ್. ಸಾರ್ವಜನಿಕರಲ್ಲಿ ಮನವಿ

ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆಯನ್ನು ರೂಪಿಸಲಾಗಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್.

ಮುಂದೆ ಓದಿ →