ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕ ಸುರಕ್ಷತೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಅಕ್ಟೋಬರ್ 27ರಿಂದ 30ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ದಾಖಲಿಸಿದೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಭಾರತದ ಮೊದಲ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಶನಿವಾರ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಂಗಳೂರು ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಹಣ, ಜಾತಿ ಮತ್ತು ರಾಜಕೀಯ ಪ್ರಭಾವಕ್ಕೆ ಅವಕಾಶ ನೀಡದೆ, ಅರ್ಹತೆ, ಪ್ರಾಮಾಣಿಕತೆ ಹಾಗೂ ರೈತಪರ ಕಾಳಜಿ ಹೊಂದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಆಗ್ರಹಿಸಿದ್ದಾರೆ.
ಬರಗಾಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಹಾಲಿನ ದರ ಹೆಚ್ಚಳ ಮತ್ತು ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಜನರ ಮೇಲೆ ಮತ್ತಷ್ಟು ಹೊರೆ ಹೊರಿಸಲಿದೆ ಎಂದು ಆರೋಪಿಸಿ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ‘ಮಿಸ್ಟರ್ ಕರ್ನಾಟಕ ರತ್ನ–2026’ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ದೇಹದಾರ್ಢ್ಯ ಪಟುಗಳು ಭಾಗವಹಿಸಲಿದ್ದಾರೆ ಎಂದು ರಾಯಚೂರು ಜಿಲ್ಲಾ ದೇಹದಾರ್ಢ್ಯ ಸಂಘದ ಪ್ರಧಾನ ಕಾರ್ಯದರ್ಶಿ…
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಖರೀದಿ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ಸುಮಾರು ₹24 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ರೈತ ರಕ್ಷಕ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿ.ಟಿ.
ಪಾರ್ಶ್ವವಾಯು ಸಂಭವಿಸಿದ ಸಂದರ್ಭದಲ್ಲಿ ಪ್ರತಿ ನಿಮಿಷವೂ ಅತ್ಯಂತ ಅಮೂಲ್ಯವಾಗಿದ್ದು, ಆರಂಭಿಕ ಲಕ್ಷಣಗಳನ್ನು ಗುರುತಿಸಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸುವುದರಿಂದ ಜೀವ ಉಳಿಸುವುದರ ಜೊತೆಗೆ ಶಾಶ್ವತ ಅಂಗವೈಕಲ್ಯದ ಅಪಾಯವನ್ನೂ ಕಡಿಮೆ ಮಾಡಬಹುದು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ್ ಕುಮಾರ್ ತಿಳಿಸಿದರು.
ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಪ್ಪು ಸರ್ ಸೇವಾ ಸಮಿತಿ ಹಾಗೂ ಸಿದ್ದು ಸೂರ್ಯವಂಶಿ ಗೆಳೆಯರ ಬಳಗದ ನೇತೃತ್ವದಲ್ಲಿ ಅಕ್ಟೋಬರ್ 29ರಂದು ಸಂಜೆ ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸುವ ಮೂಲಕ…
ನಗರದ ಎಲ್ಬಿಎಸ್ ನಗರದಲ್ಲಿ ಇತ್ತೀಚೆಗೆ ನಡೆದ ಬಾಪೂರು ನರಸಿಂಹ ಶೆಟ್ಟಿ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಹಾಗೂ ಜಿಲ್ಲಾ ಸಮಿತಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವುದರ ಜೊತೆಗೆ ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಒತ್ತಾಯಿಸಿದೆ.
ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ, ಆರ್ಥಿಕ ಇಲಾಖೆಯ ಅನುಮೋದನೆ ಪಡೆಯದೆ 75 ಹುದ್ದೆಗಳಿಗೆ ನೇಮಕಾತಿ ನಡೆಸಲಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.
ತಾಲೂಕಿನ ಎಲೆಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲದಿರುವುದರಿಂದ ಪಡಿತರ ಸಾಮಗ್ರಿ ಪಡೆಯಲು ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಗ್ರಾಮದಲ್ಲಿಯೇ ಹೊಸ ನ್ಯಾಯಬೆಲೆ ಅಂಗಡಿ ಆರಂಭಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ನಗರದ ಪೆಟ್ಲಾಬುರ್ಜ್ ಸಮೀಪದ ಗಂಗಾನಿವಾಸ ರಸ್ತೆಯಲ್ಲಿರುವ ಗಣೇಶ ಕಟ್ಟೆ ಆಟೋ ನಿಲ್ದಾಣ ಸಂಘದ ವತಿಯಿಂದ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಐದನೇ ವರ್ಷದ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ರಾಯಚೂರು, ಅ.29: ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೇವಿನಬೆಂಚಿ ರಸ್ತೆಯ ಕೈಗಾರಿಕಾ ಪ್ರದೇಶದ ನಿವಾಸಿ ದೇವರಾಜ್ ಡಿ. (31), ತಂದೆ ಶಿವರಾಜಪ್ಪ ದೇವರಮನಿ ಎಂಬ ಯುವಕ ಅಕ್ಟೋಬರ್ 15ರಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ವತಿಯಿಂದ ತಾಲೂಕಿನ ದೇವಸೂಗೂರಿನ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಎರಡು ದಿನಗಳ ರಾಜ್ಯಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಎಸ್.
ರಾಯಚೂರು, ಅ.29: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ. ಗುರುರಾಜ ಸುಂಕದ ಅವರನ್ನು ನೇಮಕ ಮಾಡಲಾಗಿದ್ದು, ಅಕ್ಟೋಬರ್ 28ರಂದು ಅವರು ಅಧಿಕಾರ ಸ್ವೀಕರಿಸಿದರು. ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಡಾ.
ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನವೆಂಬರ್ 14 ಮತ್ತು 15ರಂದು ನಡೆಯಲಿರುವ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುಸ್ತಕ ಮಾರಾಟ ಹಾಗೂ ವಾಣಿಜ್ಯ ಮಳಿಗೆಗಳನ್ನು ತೆರೆಯಲು ಆಸಕ್ತರಿಂದ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು, ಅ.29: ತಾಲೂಕಿನ ಚಿಕ್ಕಸೂಗೂರಿನ ಶ್ರೀ ಸಿದ್ಧರಾಮೇಶ್ವರ ಮಠದ 128ನೇ ಜಾತ್ರಾ ಮಹೋತ್ಸವವು ಅಕ್ಟೋಬರ್ 24ರಿಂದ 31ರವರೆಗೆ ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಅಕ್ಟೋಬರ್ 30ರಂದು ಸಂಜೆ 5.30ಕ್ಕೆ ಶ್ರೀ ಸಿದ್ಧರಾಮೇಶ್ವರರ ಭವ್ಯ ರಥೋತ್ಸವ ಜರುಗಲಿದೆ ಎಂದು ಮಠದ…
ಇಂಗ್ಲಿಷ್ ಭಾಷಾ ತರಬೇತಿಯು ಕೇವಲ ವಿಷಯ ಬೋಧನೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯ, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.
ಸರ್ಕಾರದ ಯಾವುದೇ ಮಂಜೂರಾತಿ ಆದೇಶ ಅಥವಾ ಅಧಿಕೃತ ದಾಖಲೆಗಳಿಲ್ಲದೆ ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿಯಾಗಿರುವ ಸರ್ಕಾರಿ ಭೂಮಿಯನ್ನು ಮರಳಿ ಸರ್ಕಾರದ ಹೆಸರಿಗೆ ದಾಖಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಕೈಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)-2026ರ ಬಳಿಕ ರಾಯಚೂರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪೂವಿತಾ ಎಸ್.