ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 129,793 ಇಂದಿನ ಓದುಗರು: 466 🟢 ಈಗ ಆನ್‌ಲೈನ್: 4
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಲೇಖನ ಮಂತ್ರಾಲಯ ಹೊಸಪೇಟೆ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 655 ಸುದ್ದಿಗಳಲ್ಲಿ 151–175 ಸುದ್ದಿಗಳು

ರಾಯಚೂರು

ನಶಾಮುಕ್ತ ಭಾರತ ಅಭಿಯಾನದ ನುಕ್ಕಡ್ ನಾಟಕ ಸ್ಪರ್ಧೆಯಲ್ಲಿ ಸೀತಾ ಸುಬ್ಬರಾಜು ಸ್ಮಾರಕ ಕಾಲೇಜಿಗೆ ಪ್ರಥಮ ಸ್ಥಾನ

ಜಿಲ್ಲಾ ಮಟ್ಟದ ನಶಾಮುಕ್ತ ಭಾರತ ಅಭಿಯಾನದ ಬೀದಿನಾಟಕ (ನುಕ್ಕಡ್ ನಾಟಕ) ಸ್ಪರ್ಧೆಯಲ್ಲಿ ನಗರದ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ರಾಯಚೂರು

ಬಾಪೂರು ನರಸಿಂಹ ಹತ್ಯೆ ಖಂಡಿಸಿ ಆರ್ಯವೈಶ್ಯ ಸಮಾಜದಿಂದ ಶ್ರದ್ಧಾಂಜಲಿ ಸಭೆ

ನಗರದ ಎಲ್‌ಬಿಎಸ್ ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯವೈಶ್ಯ ಸಮಾಜದ ಯುವ ವ್ಯಾಪಾರಿ ಬಾಪೂರು ನರಸಿಂಹ ಅವರ ಸಾವಿಗೆ ಸಂತಾಪ ಸೂಚಿಸಿ, ಆರ್ಯವೈಶ್ಯ ಸಮಾಜದ ವತಿಯಿಂದ ನಗರದ ನಗರೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಯಿತು.

ಮುಂದೆ ಓದಿ →
ರಾಯಚೂರು

ಹತ್ಯೆಯಾದ ಬಾಪೂರು ನರಸಿಂಹ ಕುಟುಂಬಕ್ಕೆ ಕೊಪ್ಪಳ ಆರ್ಯವೈಶ್ಯ ಸಮಾಜದಿಂದ ₹1.50 ಲಕ್ಷ ನೆರವು

ನಗರದ ಎಲ್‌ಬಿಎಸ್ ನಗರದಲ್ಲಿ ಇತ್ತೀಚೆಗೆ ಹಾಡಹಗಲೇ ಹತ್ಯೆಗೀಡಾದ ವ್ಯಾಪಾರಿ ಬಾಪೂರು ನರಸಿಂಹ ಅವರ ಕುಟುಂಬಕ್ಕೆ ಕೊಪ್ಪಳದ ಆರ್ಯವೈಶ್ಯ ಸಮಾಜದ ಮುಖಂಡರು ₹1.50 ಲಕ್ಷ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮುಂದೆ ಓದಿ →
ರಾಯಚೂರು

ಎರಡು ವಾರಕ್ಕಿಂತ ಹೆಚ್ಚು ಕೆಮ್ಮು ಇದ್ದರೆ ಕ್ಷಯರೋಗ ಪರೀಕ್ಷೆ ಮಾಡಿಸಿಕೊಳ್ಳಿ: ಡಾ. ನಂದಿತಾ ಎಂ.ಎನ್.

ಎರಡು ವಾರಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಕೆಮ್ಮು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ಕ್ಷಯರೋಗ ಪರೀಕ್ಷೆಗೆ ಒಳಗಾಗಬೇಕು.

ಮುಂದೆ ಓದಿ →
ರಾಯಚೂರು

ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ: ಎನ್. ರವಿಕುಮಾರ್

ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳಿಗೆ ದೊರೆತ ಗೆಲುವು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಮತದಾರರು ವ್ಯಕ್ತಪಡಿಸಿರುವ ಅಸಮಾಧಾನದ ಸಂಕೇತವಾಗಿದೆ.

ಮುಂದೆ ಓದಿ →
ರಾಯಚೂರು

ಕೃಷಿಕರ ಸಮಸ್ಯೆಗಳ ಪರಿಹಾರಕ್ಕೆ ಕೃಷಿ ಸಮಾಜದಿಂದ ಸಂಘಟಿತ ಪ್ರಯತ್ನ

ರೈತರ ಹಿತಾಸಕ್ತಿಗಳ ರಕ್ಷಣೆ, ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶದಿಂದ ಕೃಷಿ ಸಮಾಜದ ರಾಜ್ಯ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳ ಸಭೆ ಬುಧವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ…

ಮುಂದೆ ಓದಿ →
ರಾಯಚೂರು

ನಗರ, ಗ್ರಾಮೀಣ ಕ್ಷೇತ್ರಗಳಲ್ಲಿ ಎಸ್‌ಐಆರ್ ಪೂರ್ಣ: 1.06 ಲಕ್ಷಕ್ಕೂ ಅಧಿಕ ಮತದಾರರ ಹೆಸರು ಕೈಬಿಟ್ಟಿರುವ ಮಾಹಿತಿ

ರಾಯಚೂರು ಗ್ರಾಮೀಣ ಹಾಗೂ ನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಪೂರ್ಣಗೊಂಡಿದ್ದು, ಗೈರುಹಾಜರಿ, ವಲಸೆ, ಸ್ಥಳಾಂತರ ಹಾಗೂ ಮೃತಪಟ್ಟಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಎರಡೂ ಕ್ಷೇತ್ರಗಳಲ್ಲಿ ಒಟ್ಟು 1,06,922 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು…

ಮುಂದೆ ಓದಿ →
ರಾಯಚೂರು

ಬೆಳೆ ನಷ್ಟಕ್ಕೆ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹಿಸಿ ಶಿವಸೇನಾ ಕರ್ನಾಟಕದಿಂದ ಪ್ರತಿಭಟನೆ

ಬರಗಾಲ, ಬೆಳೆ ಹಾನಿ, ನೀರಾವರಿ ಸಮಸ್ಯೆ ಹಾಗೂ ಸಾಲದ ಹೊರೆಯಿಂದ ತತ್ತರಿಸಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು.

ಮುಂದೆ ಓದಿ →
ರಾಯಚೂರು

ಚಿಕ್ಕಸೂಗೂರು ನಿವಾಸಿಗಳ ಪರದಾಟ: ಟೆಕ್ಸ್‌ಕಾನ್ ಸ್ಟೀಲ್ ಕಾರ್ಖಾನೆ ವಿರುದ್ಧ ಕ್ರಮಕ್ಕೆ ಒತ್ತಾಯ

ತಾಲೂಕಿನ ಚಿಕ್ಕಸೂಗೂರು ಕೈಗಾರಿಕಾ ಪ್ರದೇಶದಲ್ಲಿರುವ ಟೆಕ್ಸ್‌ಕಾನ್ ಸ್ಟೀಲ್ ಕಾರ್ಖಾನೆಯಿಂದ ಹೊರಹೊಮ್ಮುತ್ತಿರುವ ಹಾರುಬೂದಿ ಸುತ್ತಮುತ್ತಲಿನ ಜನರ ನೆಮ್ಮದಿಗೆ ಭಂಗ ತಂದಿದ್ದು, ಮಾಲಿನ್ಯ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಯುವ ಜಾಗೃತಿ ವೇದಿಕೆಯ ಜಿಲ್ಲಾ ಘಟಕ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಮುಂದೆ ಓದಿ →
ರಾಯಚೂರು

ನಮೋಶಿ ಐದನೇ ಬಾರಿ ಗೆಲುವು: ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ರಾಯಚೂರು: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಸತತ ಐದನೇ ಬಾರಿಗೆ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಮುಂದೆ ಓದಿ →
ರಾಯಚೂರು

ಶಶೀಲ್ ನಮೋಶಿ ಗೆಲುವಿಗೆ ವಿಜಯರಾಜೇಶ್ವರಿ ಗೋಪಿಶೆಟ್ಟಿ ಅಭಿನಂದನೆ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ.

ಮುಂದೆ ಓದಿ →
ರಾಯಚೂರು

ಆರ್‌ಟಿಪಿಎಸ್‌, ವೈಟಿಪಿಎಸ್‌ ಅಭಿವೃದ್ಧಿಗೆ ಕೆಪಿಸಿಎಲ್ ಅಧಿಕಾರಿಗಳೊಂದಿಗೆ ಶಾಸಕ ದದ್ದಲ್ ಸಮಾಲೋಚನೆ

ಜಿಲ್ಲೆಯ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್‌ಟಿಪಿಎಸ್‌) ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್‌) ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ನಿವಾರಣೆ ಮತ್ತು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಕರ್ನಾಟಕ ವಿದ್ಯುತ್ ನಿಗಮ…

ಮುಂದೆ ಓದಿ →
ರಾಯಚೂರು

ಶರಣರ ಜೀವನ ದರ್ಶನವೇ ಇಂದಿನ ಸಮಾಜಕ್ಕೆ ದಾರಿದೀಪ: ಡಾ. ಅರುಣಾ ಹಿರೇಮಠ

ಹನ್ನೆರಡನೇ ಶತಮಾನದ ಶಿವಶರಣರು ಪ್ರತಿಪಾದಿಸಿದ ಕಾಯಕ, ಭಕ್ತಿ, ದಾಸೋಹ ಮತ್ತು ಸೇವಾ ಮನೋಭಾವದಂತಹ ಜೀವನ ಮೌಲ್ಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ.

ಮುಂದೆ ಓದಿ →
ರಾಯಚೂರು

ಸತ್ಯಾತ್ಮ ಶಿವಲಿಂಗೇಶ್ವರ ಮಠದಲ್ಲಿ ಸುಗಮ ಸಂಗೀತ ಹಾಗೂ ತತ್ವಪದ ಗಾಯನ

ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸದ್ಗುರು ಸತ್ಯಾತ್ಮ ಶಿವಲಿಂಗೇಶ್ವರ ಮಠದಲ್ಲಿ ಶ್ರೀ ಬಸವೇಶ್ವರ ಸಾಂಸ್ಕೃತಿಕ ಅಭಿವೃದ್ಧಿ ಕಲಾ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸುಗಮ ಸಂಗೀತ ಮತ್ತು ತತ್ವಪದ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಂದೆ ಓದಿ →
ರಾಯಚೂರು

ರಾಯಚೂರು ವಿಶ್ವವಿದ್ಯಾಲಯದಲ್ಲಿ ತತ್ವಪದ ಸಾಹಿತ್ಯ ಅಧ್ಯಯನ ಪೀಠ ಸ್ಥಾಪನೆಗೆ ಕನ್ನಡ ಸಾಹಿತ್ಯ ಪರಿಷತ್ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ತತ್ವಪದ ಸಾಹಿತ್ಯದ ಸಂರಕ್ಷಣೆ, ಸಂಶೋಧನೆ ಹಾಗೂ ಪ್ರಸಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕ ‘ತತ್ವಪದ ಸಾಹಿತ್ಯ ಅಧ್ಯಯನ ಪೀಠ’ವನ್ನು ಸ್ಥಾಪಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ…

ಮುಂದೆ ಓದಿ →
ರಾಯಚೂರು

ಸಿಸಿಟಿವಿಯಲ್ಲಿ ಆಯುಧ ಹಿಡಿದ ವ್ಯಕ್ತಿಯ ಓಡಾಟ ಸೆರೆ

ನಗರದ ಆಶಾಪುರ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹಾಗೂ ಕಳ್ಳತನದ ಯತ್ನಗಳು ಹೆಚ್ಚಾಗುತ್ತಿರುವ ಆರೋಪ ಕೇಳಿಬಂದಿದ್ದು, ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಮುಂದೆ ಓದಿ →
ರಾಯಚೂರು

ಅಕ್ರಮ ಮದ್ಯ, ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಿ: ಪೊಲೀಸ್ ವರಿಷ್ಠಾಧಿಕಾರಿಗೆ ಬಿಜೆಪಿ ಮುಖಂಡರ ಮನವಿ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಅಕ್ರಮ ಮದ್ಯ ಮತ್ತು ಗಾಂಜಾ ಮಾರಾಟವನ್ನು ನಿಯಂತ್ರಿಸಿ, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ರಾಯಚೂರು

ಗಾಂಜಾ ದಂಧೆಗೆ ಕಡಿವಾಣ ಹಾಕಲು ವಾರದ ಗಡುವು: ಇಲ್ಲದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಹಾಗೂ ಇತರ ಮಾದಕ ವಸ್ತುಗಳ ಅಕ್ರಮ ಮಾರಾಟವನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಒಂದು ವಾರದೊಳಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಮುಂದೆ ಓದಿ →
ರಾಯಚೂರು

ತಿಡಿಗೋಳದಲ್ಲಿ ದಲಿತರ ಮೇಲಿನ ದೌರ್ಜನ್ಯ ಆರೋಪ: ನ್ಯಾಯಕ್ಕಾಗಿ ನ.8ರಂದು ಬೃಹತ್ ಹೋರಾಟಕ್ಕೆ ನಿರ್ಧಾರ

ಮಸ್ಕಿ ವಿಧಾನಸಭಾ ಕ್ಷೇತ್ರದ ತಿಡಿಗೋಳ ಮತ್ತು ನಿಡಿಗೋಳ ಗ್ರಾಮಗಳಲ್ಲಿ ದಲಿತ ಸಮುದಾಯದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ದಲಿತ ಮುಖಂಡ ಹಾಗೂ ಉಪನ್ಯಾಸಕ ತಾಯಪ್ಪ ತಿಡಿಗೋಳ್ ತಿಳಿಸಿದರು.

ಮುಂದೆ ಓದಿ →
ರಾಯಚೂರು

ಯುವ ಕ್ರೀಡಾಪಟುಗಳಿಗೆ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ: ಅ.29ರಂದು ನಿಡ್ಜಾಮ್-2026 ಕ್ರೀಡಾಕೂಟ

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಜೊತೆಗೆ ಪ್ರತಿಭಾವಂತರನ್ನು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಅಕ್ಟೋಬರ್ 29ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಿಡ್ಜಾಮ್-2026 (NIDJAM) ಅಥ್ಲೆಟಿಕ್ಸ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಅಥ್ಲೆಟಿಕ್ಸ್…

ಮುಂದೆ ಓದಿ →
ರಾಯಚೂರು

ವ್ಯಾಪಾರಸ್ಥನ ಬರ್ಬರ ಹತ್ಯೆಗೆ ಕನ್ನಡಪರ ಸಂಘಟನೆಗಳ ಆಕ್ರೋಶ: ನಗರದಲ್ಲಿ ಭದ್ರತೆ ಹೆಚ್ಚಿಸಲು ಆಗ್ರಹ

ನಗರದ ಎಲ್‌ಬಿಎಸ್ ನಗರದಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಅಮಾಯಕ ವ್ಯಾಪಾರಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಿ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಮುಂದೆ ಓದಿ →
ರಾಯಚೂರು

ಯುವಕರು ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆಯಲಿ: ಎಸ್ಪಿ ಅರುಣಾಂಗ್ಷು ಗಿರಿ

ಯುವಜನತೆ ದುಶ್ಚಟಗಳಿಂದ ದೂರವಿದ್ದು, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳಿಂದ ಸ್ಫೂರ್ತಿ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕರೆ ನೀಡಿದರು.

ಮುಂದೆ ಓದಿ →
ರಾಯಚೂರು

ವಿಜಯೋತ್ಸವಕ್ಕೆ ವಿದ್ಯಾರ್ಥಿಗಳೊಂದಿಗೆ ಸರಳ ಚಾಲನೆ: ಆತ್ಮವಿಶ್ವಾಸ ಮತ್ತು ದೈಹಿಕ ಸದೃಢತೆಗೆ ಡಾ. ವೀರೇಂದ್ರ ಜಲ್ದಾರ್ ಕರೆ

ರಾಯಚೂರು: ನಗರದ ವಿ.ಜೆ. ಇಂಟರ್‌ನ್ಯಾಷನಲ್ಸ್ ಪ್ರೊಡಕ್ಷನ್ ವತಿಯಿಂದ ಅಕ್ಟೋಬರ್ 25ರಂದು ರಾಯಚೂರು ವಿಜಯೋತ್ಸವ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸರಳವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿ.ಜೆ. ಇಂಟರ್‌ನ್ಯಾಷನಲ್ಸ್ ಪ್ರೊಡಕ್ಷನ್ ಮುಖ್ಯಸ್ಥ ಡಾ.

ಮುಂದೆ ಓದಿ →
ರಾಯಚೂರು

ರಾಮಾಯಣ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಸಾರಿದ ಮಹಾಕಾವ್ಯ: ಎನ್. ಶಂಕ್ರಪ್ಪ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ವಿಶ್ವದಾದ್ಯಂತ ಗೌರವ ಪಡೆದಿರುವ ಶ್ರೇಷ್ಠ ಮಹಾಕಾವ್ಯವಾಗಿದ್ದು, ಭಾರತೀಯ ಸಂಸ್ಕೃತಿ, ಧಾರ್ಮಿಕ ಪರಂಪರೆ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎನ್.

ಮುಂದೆ ಓದಿ →
ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಪುತ್ಥಳಿಗೆ ಮಾಲಾರ್ಪಣೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸುವ ಮೂಲಕ ಗೌರವಪೂರ್ವಕವಾಗಿ ಜಯಂತಿ ಆಚರಿಸಲಾಯಿತು.

ಮುಂದೆ ಓದಿ →