ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಸುಣಕಲ್ ಗ್ರಾಮದಲ್ಲಿ ನಡೆದ ಜಾತಿ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ₹3 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ತಾಲ್ಲೂಕಿನ ಕಮಲದಿನ್ನಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಸಚಿನ್ ನಗರ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಲಿಂಗಸೂಗೂರು ಬಸ್ ಡಿಪೊ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿಕಾರರು, ಅಂಗನವಾಡಿ ಕೇಂದ್ರಗಳ ಮಕ್ಕಳು ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಮತ್ತು ಸೌಲಭ್ಯಗಳ ಒದಗಿಸುವಿಕೆಯಲ್ಲಿ ಯಾವುದೇ ರೀತಿಯ ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಯಚೂರು ಜಿಲ್ಲಾ ಪಂಚಾಯಿತಿ…
ಅಂತರ್ಜಾತಿ ವಿವಾಹವಾಗಿರುವ ಕಾರಣಕ್ಕೆ ಮಹಿಳೆ ಹಾಗೂ ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಜಾತಿ ಆಧಾರಿತ ನಿಂದನೆ, ಕೌಟುಂಬಿಕ ದೌರ್ಜನ್ಯ ಮತ್ತು ಸಾಮಾಜಿಕ ಬಹಿಷ್ಕಾರ ಹೇರಲಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಲಿಂಗಸುಗೂರು, ನ.6: ಯಾವುದೇ ಮಾನ್ಯತೆ ಪಡೆದ ವೈದ್ಯಕೀಯ ಪದವಿ ಅಥವಾ ಅರ್ಹತೆ ಇಲ್ಲದೆ ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿಕೊಂಡು ಚಿಕಿತ್ಸೆ ನೀಡುತ್ತಿರುವ ನಕಲಿ ವೈದ್ಯರ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಿ, ಎಫ್ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು…
ತಾಲೂಕಿನ ರೈತರ ಜೀವನಾಡಿಯಾಗಿರುವ ನಾರಾಯಣಪುರ ಬಲದಂಡೆ ಹಾಗೂ ರಾಮಪುರ ಏತ ನೀರಾವರಿ ಕಾಲುವೆಗಳಿಗೆ ಡಿಸೆಂಬರ್ ಕೊನೆಯ ವಾರದವರೆಗೆ ನಿರಂತರವಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ಬಸವಸಾಗರ ಕ್ರಾಸ್ ಬಳಿ ನಾಲ್ಕು ಕಡೆ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನ ವಿವಿಧ ಹೋಬಳಿಗಳಲ್ಲಿ ಅನಿಯಮಿತವಾಗಿ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ರೈತರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ವಿದ್ಯುತ್ ಕಡಿತವನ್ನು ನಿಲ್ಲಿಸಿ ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲು ವೇಳೆಯಲ್ಲಿ ನಿರಂತರ 9 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…
ಪಟ್ಟಣದ ಶ್ರೀ ಶರಣಬಸವೇಶ್ವರ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಪವಿತ್ರಾ ಪರಸಪ್ಪ ಅವರು 2026–27ನೇ ಸಾಲಿನ 17 ವರ್ಷದೊಳಗಿನ ಬಾಲಕಿಯರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಪಟ್ಟಣದ ಪುರಸಭೆ ವ್ಯಾಪ್ತಿಯ 7ನೇ ವಾರ್ಡ್ನ ಹೊಸ ಬಸ್ ನಿಲ್ದಾಣದ ಸಮೀಪವಿರುವ ಸಾರ್ವಜನಿಕ ಶೌಚಾಲಯದ ಸೆಪ್ಟಿಕ್ ಟ್ಯಾಂಕ್ ತುಂಬಿ, ಮಲಿನ ನೀರು ಚರಂಡಿ ಮೂಲಕ ಹಳ್ಳಕ್ಕೆ ಹರಿಯುತ್ತಿರುವುದರಿಂದ ಸುತ್ತಮುತ್ತಲಿನ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಪಟ್ಟಣದ ಬೀದಿಬದಿ ವ್ಯಾಪಾರಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸಿ, ವ್ಯಾಪಾರಿಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಬೀದಿಬದಿ ಮಾರಾಟಗಾರರ ಸಂಘದ (ಟಿಯುಸಿಐ)…
ರಾಜ್ಯದ ವಿವಿಧೆಡೆ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ, ಹತ್ಯೆ ಹಾಗೂ ಕೊಲೆ ಯತ್ನದ ಘಟನೆಗಳನ್ನು ತೀವ್ರವಾಗಿ ಖಂಡಿಸಿ, ವಕೀಲರಿಗೆ ಸೂಕ್ತ ಭದ್ರತೆ ಒದಗಿಸುವುದರ ಜೊತೆಗೆ ಸಮಗ್ರ ವಕೀಲರ ರಕ್ಷಣಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಲಿಂಗಸುಗೂರು ವಕೀಲರ ಸಂಘದ ವತಿಯಿಂದ ಮಂಗಳವಾರ ನ್ಯಾಯಾಲಯದ…
ಸಹಕಾರಿ ಸಂಘಗಳು ಕೇವಲ ಹಣಕಾಸಿನ ವ್ಯವಹಾರಗಳಿಗೆ ಸೀಮಿತವಾಗದೆ ಜನರ ಆರ್ಥಿಕ ಪ್ರಗತಿ, ಸಾಮಾಜಿಕ ಏಳಿಗೆ ಹಾಗೂ ಪರಸ್ಪರ ವಿಶ್ವಾಸವನ್ನು ಬೆಳೆಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ದೇವರಭೂಪುರ ಅಮರೇಶ್ವರ ಗುರು ಅಭಿನವ ಗಜದಂಡ ಶಿವಾಚಾರ್ಯರು ಹೇಳಿದರು.
ಲಿಂಗಸುಗೂರು: ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಲಿಂಗಸುಗೂರಿನ ಡಾ. ಸುಧಾಮೂರ್ತಿ ಇನೋ ಮಹಿಳಾ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನವೆಂಬರ್ 2 ಮತ್ತು 3ರಂದು ಅಂತರ್ ಮಹಿಳಾ ಮಹಾವಿದ್ಯಾಲಯಗಳ ಕಬಡ್ಡಿ ಮತ್ತು ಥ್ರೋಬಾಲ್ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ರಮೇಶ ವೆಂಕಟಾಪುರ ತಿಳಿಸಿದರು.
2026–27ನೇ ಸಾಲಿನ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ (SGFI) ವತಿಯಿಂದ ಆಯೋಜಿಸಿದ್ದ 14 ವರ್ಷದೊಳಗಿನ ಬಾಲಕರ ರಾಜ್ಯಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಲಿಂಗಸುಗೂರು ತಾಲೂಕಿನ ವಿದ್ಯಾರ್ಥಿ ಆರ್ಯನ್ ಗೌತಮ್ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ…
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 2ರಿಂದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ ಆಯೋಜಿಸಲಾಗಿದ್ದು, ಅಂತಿಮ ಹಂತದ ಸ್ಪರ್ಧೆಯನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆಸಿ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಆಯೋಜಕ ಚಾಮರಾಜ ತಿಳಿಸಿದರು.
ಲಿಂಗಸುಗೂರು: ಭೋವಿ ಜಾತಿ ಪ್ರಮಾಣಪತ್ರದ ಸಮಸ್ಯೆ ಪರಿಹಾರಕ್ಕೆ ಶ್ರಮಿಸುತ್ತಿರುವ ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಅವರಿಗೆ ಶಿವಮೊಗ್ಗದಲ್ಲಿ ಕೆಲವರು ಘೇರಾವ್ ಹಾಕಿ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘ ಆಗ್ರಹಿಸಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಲಿಂಗಸುಗೂರಿನ ಶಾರದಾ ವಿದ್ಯಾಮಂದಿರ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಮತ್ತು ತ್ರಿಪದಿ ಸಾಹಿತ್ಯ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ದುರ್ಗಾಸಿಂಗ್ ತಿಳಿಸಿದರು.
ಲಿಂಗಸುಗೂರು: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕು ಘಟಕ ನಡೆಸಿದ್ದ ಹೋರಾಟಕ್ಕೆ ಸ್ಪಂದನೆ ದೊರೆತಿದ್ದು, ಚರ್ಮರೋಗ ತಜ್ಞ ಡಾ. ಮಲ್ಲೇಶ ಅವರನ್ನು ನೇಮಕ ಮಾಡಲಾಗಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ನೇ ಸಾಲಿನಲ್ಲಿ ಕೈಗೊಂಡ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,25,916 ಮತದಾರರನ್ನು ಒಳಗೊಂಡ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ…
ಲಿಂಗಸುಗೂರು: ಕ್ಷಯರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ತಾಲೂಕಿನಲ್ಲಿ ಕ್ಷಯರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಡಿಸೆಂಬರ್ 8ರವರೆಗೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಹನುಮಂತರಾಯ ತಳ್ಳಳ್ಳಿ ತಿಳಿಸಿದರು.
ತಾಲೂಕಿನ ಹಲ್ಕಾವಟಿಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕನಾಳ ಹಾಗೂ ಉಪನಾಳ ಗ್ರಾಮಗಳಿಗೆ ಗ್ರಾಮೀಣ ಉದ್ಯೋಗ ಯೋಜನೆಯಡಿ ಕಾಮಗಾರಿಗಳನ್ನು ಮಂಜೂರು ಮಾಡುವಲ್ಲಿ ಅಧಿಕಾರಿಗಳು ತಾರತಮ್ಯ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡು…