ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಉಪನ್ಯಾಸಕ ಗೋವರ್ಧನ್ ರೆಡ್ಡಿ ಕರೆ ನೀಡಿದರು.
ಬಾಲ್ಯವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಅದನ್ನು ತಡೆಗಟ್ಟಲು ಕಾನೂನು ಅರಿವು ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ವಕೀಲ ಮಲ್ಲಿಕಾರ್ಜುನ ಪೆನಾಲ್ ತಿಳಿಸಿದರು.
ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳನ್ನು ನಿರ್ಲಕ್ಷಿಸದೆ, ಅವರಿಗೆ ಕುಟುಂಬದವರ ಪ್ರೀತಿ, ಸಹಕಾರ, ಧೈರ್ಯ ಹಾಗೂ ಸೂಕ್ತ ಆಪ್ತಸಮಾಲೋಚನೆಯೊಂದಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮನಶಾಸ್ತ್ರಜ್ಞ ಅರುಣ್ ಕುಮಾರ್ ಕುಲಕರ್ಣಿ ಹೇಳಿದರು.
ತಾಲೂಕಿನ ದೇವಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬೇರು ಓಣಿಯಲ್ಲಿ ಆರು ಮನೆಗಳ ಸಾರ್ವಜನಿಕ ಬಳಕೆಗೆ ಕುಡಿಯುವ ನೀರಿನ ನಳ ಅಳವಡಿಸುವುದು ಹಾಗೂ ಚರಂಡಿ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕದ ವತಿಯಿಂದ ಕೃಷ್ಣ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮರುಜ್ಞಾಪನಾ…
ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಸ್ಎಂಎಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಾಯಚೂರು ತಾಲೂಕಿನ ದೇವಸುಗೂರಿನ ಸೂಗೂರೇಶ್ವರ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ವಿವಿಧ ವಿಭಾಗಗಳಲ್ಲಿ ಪದಕ ಹಾಗೂ ಟ್ರೋಫಿಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ…
ರಾಯಚೂರು, ಅ.31: ನಗರದ ಬೇರೂನಕಿಲ್ಲ ಬಡಾವಣೆಯ ವಾರ್ಡ್ ನಂ. 09ರ ವ್ಯಾಪ್ತಿಯ ಪ್ರಮುಖ ರಸ್ತೆಗಳು ದುಸ್ಥಿತಿಗೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ಹಾಗೂ ಸಮಾಜಸೇವಕ ರವಿಚಂದ್ರ ಅಲಿಯಾಸ್ ಆಟೋರವಿ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕ ಸುರಕ್ಷತೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಅಕ್ಟೋಬರ್ 27ರಿಂದ 30ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ದಾಖಲಿಸಿದೆ.
2026–27ನೇ ಸಾಲಿನ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ (SGFI) ವತಿಯಿಂದ ಆಯೋಜಿಸಿದ್ದ 14 ವರ್ಷದೊಳಗಿನ ಬಾಲಕರ ರಾಜ್ಯಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಲಿಂಗಸುಗೂರು ತಾಲೂಕಿನ ವಿದ್ಯಾರ್ಥಿ ಆರ್ಯನ್ ಗೌತಮ್ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ…
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಭಾರತದ ಮೊದಲ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಶನಿವಾರ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಂಗಳೂರು ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಹಣ, ಜಾತಿ ಮತ್ತು ರಾಜಕೀಯ ಪ್ರಭಾವಕ್ಕೆ ಅವಕಾಶ ನೀಡದೆ, ಅರ್ಹತೆ, ಪ್ರಾಮಾಣಿಕತೆ ಹಾಗೂ ರೈತಪರ ಕಾಳಜಿ ಹೊಂದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಆಗ್ರಹಿಸಿದ್ದಾರೆ.
ಬರಗಾಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಹಾಲಿನ ದರ ಹೆಚ್ಚಳ ಮತ್ತು ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಜನರ ಮೇಲೆ ಮತ್ತಷ್ಟು ಹೊರೆ ಹೊರಿಸಲಿದೆ ಎಂದು ಆರೋಪಿಸಿ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ‘ಮಿಸ್ಟರ್ ಕರ್ನಾಟಕ ರತ್ನ–2026’ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ದೇಹದಾರ್ಢ್ಯ ಪಟುಗಳು ಭಾಗವಹಿಸಲಿದ್ದಾರೆ ಎಂದು ರಾಯಚೂರು ಜಿಲ್ಲಾ ದೇಹದಾರ್ಢ್ಯ ಸಂಘದ ಪ್ರಧಾನ ಕಾರ್ಯದರ್ಶಿ…
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಖರೀದಿ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ಸುಮಾರು ₹24 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ರೈತ ರಕ್ಷಕ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿ.ಟಿ.
ಶ್ರೀ ಲಕ್ಷ್ಮೀ ರಂಗನಾಥ ಗೋವಿಂದ ಸೇವಾ ಸಮಿತಿ ಹಾಗೂ ಜಾಲಹಳ್ಳಿ ಸದ್ಭಕ್ತ ಮಂಡಳಿ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮುಖ್ಯ ಪ್ರಾಣ ಮೆಲೋಡೀಸ್ ಆರ್ಕೆಸ್ಟ್ರಾ ತಂಡದ ಸಂಗೀತ ಕಾರ್ಯಕ್ರಮ ನೆರೆದಿದ್ದ ಪ್ರೇಕ್ಷಕರ ಗಮನ ಸೆಳೆಯಿತು.
ತಾಲೂಕಿನ ಅರಗಿನಮರದ ಸಮೀಪ ಶುಕ್ರವಾರ ಬೆಳಿಗ್ಗೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಇತರ 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕವಿತಾಳ, ಅ. 30- ರೈತರ ಪಂಪ್ ಸೆಟ್ ಗಳಿಗೆ ರಾತ್ರಿ ಸಮಯದಲ್ಲಿ ನೀಡುತ್ತಿರುವ ವಿದ್ಯುತ್ ಪೂರೈಕೆ ಸಮಯ ಬದಲಾವಣೆ ಮಾಡಿ ಹಗಲಿನಲ್ಲಿ ಪೂರೈಕೆ ಮಾಡಿ ಎಂದು ಆಗ್ರಹಿಸಿ ಪಟ್ಟಣದ ಜೆಸ್ಕಾಂ ಕಚೇರಿ ಮುಂದೆ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 2ರಿಂದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ ಆಯೋಜಿಸಲಾಗಿದ್ದು, ಅಂತಿಮ ಹಂತದ ಸ್ಪರ್ಧೆಯನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆಸಿ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಆಯೋಜಕ ಚಾಮರಾಜ ತಿಳಿಸಿದರು.
ಲಿಂಗಸುಗೂರು: ಭೋವಿ ಜಾತಿ ಪ್ರಮಾಣಪತ್ರದ ಸಮಸ್ಯೆ ಪರಿಹಾರಕ್ಕೆ ಶ್ರಮಿಸುತ್ತಿರುವ ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಅವರಿಗೆ ಶಿವಮೊಗ್ಗದಲ್ಲಿ ಕೆಲವರು ಘೇರಾವ್ ಹಾಕಿ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘ ಆಗ್ರಹಿಸಿದೆ.
ಪಾರ್ಶ್ವವಾಯು ಸಂಭವಿಸಿದ ಸಂದರ್ಭದಲ್ಲಿ ಪ್ರತಿ ನಿಮಿಷವೂ ಅತ್ಯಂತ ಅಮೂಲ್ಯವಾಗಿದ್ದು, ಆರಂಭಿಕ ಲಕ್ಷಣಗಳನ್ನು ಗುರುತಿಸಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸುವುದರಿಂದ ಜೀವ ಉಳಿಸುವುದರ ಜೊತೆಗೆ ಶಾಶ್ವತ ಅಂಗವೈಕಲ್ಯದ ಅಪಾಯವನ್ನೂ ಕಡಿಮೆ ಮಾಡಬಹುದು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ್ ಕುಮಾರ್ ತಿಳಿಸಿದರು.
ತಾಲೂಕಿನ ಬ್ಯಾಗವಾಟ ಗ್ರಾಮದಲ್ಲಿ ಬೇಸಿಗೆ ಅವಧಿಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಗ್ರಾಮದ ಕುಡಿಯುವ ನೀರಿನ ಕೆರೆಯನ್ನು ಕಾಲುವೆ ನೀರಿನಿಂದ ಭರ್ತಿ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲಿದ್ ಅಹಮ್ಮದ್ ತಿಳಿಸಿದರು.
ಮಕ್ಕಳು ಅಪರಿಚಿತ ವ್ಯಕ್ತಿಗಳಿಂದ ಯಾವುದೇ ರೀತಿಯ ಕಿರುಕುಳ, ಮಾನಸಿಕ ಹಿಂಸೆ ಅಥವಾ ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಭಯಪಡದೆ ತಕ್ಷಣ ಪಾಲಕರು, ಶಿಕ್ಷಕರು ಅಥವಾ ಶಾಲೆಯ ಮುಖ್ಯಗುರುಗಳಿಗೆ ಮಾಹಿತಿ ನೀಡಬೇಕು.
ದಸರಾ ಹಬ್ಬದ ಅಂಗವಾಗಿ ಶ್ರೀ ದುರ್ಗಾದೇವಿ ಕಮಿಟಿ ವತಿಯಿಂದ ಜಾಲಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಎರಡನೇ ವರ್ಷದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಈ ಚಟುವಟಿಕೆಗಳಿಗೆ ತಕ್ಷಣ ಕಡಿವಾಣ ಹಾಕುವುದರ ಜೊತೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಕಾರ್ಯನಿರ್ವಹಣೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಭೀಮರಾಜ ಸೇನೆ ಕರ್ನಾಟಕ ಸಂಘಟನೆ ಒತ್ತಾಯಿಸಿದೆ.