ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಉಲ್ಲಂಘಿಸಿದ ಪ್ರಕರಣದಲ್ಲಿ ದೇವದುರ್ಗ ಪಟ್ಟಣದ ನಿವಾಸಿಯೊಬ್ಬರಿಗೆ ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ದೇವದುರ್ಗದ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಐಪಿಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಶಿಕ್ಷಣ, ರಸ್ತೆ ಸಂಪರ್ಕ, ಕುಡಿಯುವ ನೀರು ಹಾಗೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ರಾಯಚೂರು, ನ.11: ಆಧುನಿಕ ರಸಾಯನಶಾಸ್ತ್ರದಲ್ಲಿ ಅಣುಗಳ ರಚನೆ, ವಸ್ತುಗಳ ಗುಣಲಕ್ಷಣ ಹಾಗೂ ಅವುಗಳ ಸಂಯೋಜನೆಯನ್ನು ಗುರುತಿಸುವಲ್ಲಿ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ಲತಾ ಎಂ.ಎಸ್. ಹೇಳಿದರು.
ಹಾಲು, ಮೊಸರು, ತುಪ್ಪ ಹಾಗೂ ಸಾರಿಗೆ ಬಸ್ಗಳ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರ ಜೀವನ ನಿರ್ವಹಣೆ ದುಸ್ತರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಎಲ್ವಿಡಿ ಕಾಲೇಜು ಹಾಗೂ ಕೆಎಸ್ಸಿಎ ಕ್ರಿಕೆಟ್ ಮೈದಾನಗಳಲ್ಲಿ ಆರಂಭವಾದ 14 ವರ್ಷದೊಳಗಿನವರ (ಅಂಡರ್-14) ಅಂತರ ಜಿಲ್ಲಾ ಕ್ರಿಕೆಟ್ ಪಂದ್ಯಾವಳಿಯ 'ಬಿ' ಗುಂಪಿನ ಪಂದ್ಯಗಳಲ್ಲಿ ವಿಜಯಪುರ ಹಾಗೂ ಕೊಪ್ಪಳ ತಂಡಗಳು ಗೆಲುವು ಸಾಧಿಸಿವೆ.
ವೀರವನಿತೆ ಒನಕೆ ಓಬವ್ವ ಅವರ ಕಾಯಕನಿಷ್ಠೆ, ಧೈರ್ಯ, ಸಾಹಸ ಹಾಗೂ ದೇಶಪ್ರೇಮ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾಗಿದ್ದು, ವಿದ್ಯಾರ್ಥಿನಿಯರು ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.
ತಾಲೂಕಿನ ಕಾಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಷಿಣಗಿ ಗ್ರಾಮದ ಪರಿಶಿಷ್ಟ ಜಾತಿ ಓಣಿಯಲ್ಲಿ ಕಳೆದ 30ರಿಂದ 35 ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಇತಿಹಾಸದ ಪುಟಗಳಲ್ಲಿ ಸಾಹಸ, ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ವೀರರಾಣಿ ಒನಕೆ ಓಬವ್ವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕವಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರು ಹೇಳಿದರು.
ಸರಿಯಾಗಿ ಓದಲು ಬರುತ್ತಿಲ್ಲ ಎಂಬ ಕಾರಣಕ್ಕೆ 10 ವರ್ಷದ ಬಾಲಕನ ಬಾಯಿಗೆ ಬಟ್ಟೆ ತುರುಕಿ, ಕಟ್ಟಿಗೆಯಿಂದ ಕಣ್ಣು, ತಲೆ, ಬೆನ್ನು ಹಾಗೂ ಕೈಕಾಲುಗಳಿಗೆ ಮನಬಂದಂತೆ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಆರೋಪ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಫ್ಫಾಜ್ ಶಾಲೆಯಲ್ಲಿ ಕೇಳಿಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಕರ ರೀತಿಯಲ್ಲಿ ವರ್ತಿಸಿದ್ದಲ್ಲದೆ, ರೌಡಿಶೀಟರ್ ಹಾಗೂ ವಂಚನೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಯಚೂರು ಜಿಲ್ಲಾ ಹತ್ತಿ ಬೆಳೆಗಾರರ ರೈತರ ಹೋರಾಟ ಸಮಿತಿ ಅಧ್ಯಕ್ಷ ಪಿ.ಎಸ್.
ತಾಲೂಕಿನ ಇಡಪನೂರು ಗ್ರಾಮದಿಂದ ಮೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ₹70 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿರುವ ಇಡಪನೂರು ಗ್ರಾಮದ ನಿವಾಸಿ ಯೋಹಾನ್, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ…
ರಾಯಚೂರು, ನ. 10: ವಿದೇಶಿ ಸಂಸ್ಕೃತಿಯ ಪ್ರಭಾವದಿಂದ ನಮ್ಮ ನಾಡಿನ ಸಂಸ್ಕೃತಿ ಹಾಗೂ ಪರಂಪರೆಯ ಕಲೆಗಳು ಮರೆಯಾಗುತ್ತಿವೆ. ಮುಂದಿನ ಯುವ ಪೀಳಿಗೆಗೆ ನಾಡಿನ ಸೊಗಡನ್ನು ಪರಿಚಯಿಸುವ ದೇಸಿ ಕಲೆಗಳನ್ನು ಉಳಿಸಿ ಬೆಳೆಸುವುದು ಅಗತ್ಯವಾಗಿದೆ.
ನೂತನ ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಿರುವ ಫಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ, ಫಲಕನಮರಡಿ, ಮೂಡಲಗುಂಡ, ಮದರಕಲ್, ದೇವರಗುಡ್ಡ ಹಾಗೂ ಊಟಿ ಗ್ರಾಮಗಳನ್ನು ಪುನಃ ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಿ, ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ನವೆಂಬರ್ 6ರಂದು ಜಿಲ್ಲಾಧಿಕಾರಿಗಳಿಗೆ…
ನಗರದ ಬೃಹಸ್ಪತಿವಾರಪೇಟೆ ಹಾಗೂ ಮಕ್ತಲಪೇಟೆ ಮಧ್ಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಶಾಂಭವಿ ಚಕ್ಲಿ ಕೇಂದ್ರದಲ್ಲಿ ಮೂರನೇ ವರ್ಷದ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾದ ರಾಯಚೂರು ಜಿಲ್ಲಾ ಕಾರ್ಯನಿರ್ವಾಹಕ ಸಮಿತಿಯ ಖಾಯಂ ಆಹ್ವಾನಿತರನ್ನಾಗಿ ರೇವಣಸಿದ್ದಪ್ಪ ಗರಡಿ ಅವರನ್ನು ನೇಮಕ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಮಿರ್ಜಾಪುರ ಆದೇಶ ಹೊರಡಿಸಿದ್ದಾರೆ.
ತಾಲೂಕಿನ ಚಂದ್ರಬಂಡಾ ಗ್ರಾಮದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಬಂಡೆ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ನವೆಂಬರ್ 10ರಿಂದ 12ರವರೆಗೆ ಮೂರು ದಿನಗಳ ಕಾಲ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಗಾಂಜಾ, ತಂಬಾಕು, ಮದ್ಯಪಾನ ಸೇರಿದಂತೆ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದಲ್ಲದೆ, ಕುಟುಂಬದ ನೆಮ್ಮದಿ ಮತ್ತು ಆರ್ಥಿಕ ಸ್ಥಿರತೆಯೂ ಹಾಳಾಗುತ್ತದೆ.
ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ ನೆಟ್)ಗೆ ಸಿದ್ಧತೆ ನಡೆಸುತ್ತಿರುವ ಸ್ನಾತಕೋತ್ತರ ಪದವೀಧರರು ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಮುಂದುವರಿಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಅಶ್ವಮೇಧ ಫೌಂಡೇಶನ್ ವತಿಯಿಂದ ನವೆಂಬರ್ 14 ಮತ್ತು 15ರಂದು ಎರಡು ದಿನಗಳ…
ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ, ಲೇಖಕ, ಸಂಶೋಧಕ ಹಾಗೂ ನಾಟಕಕಾರ ರಾಮಣ್ಣ ಹವಳೆ ಅವರನ್ನು ಸಾಹಿತ್ಯಾಭಿಮಾನಿಗಳು, ಶಿಕ್ಷಕರು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಡಿ ರಾಯಚೂರು ಜಿಲ್ಲೆಯ ಮಾನ್ವಿ, ಸಿರವಾರ ಹಾಗೂ ಸಿಂಧನೂರು ತಾಲೂಕುಗಳಲ್ಲಿ ಸುಮಾರು ₹19 ಕೋಟಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ಭೋವಿ-ವಡ್ಡರ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಬಿ.ಕೆ.
ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆಯನ್ನು ರೂಪಿಸಲಾಗಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್.