ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,139 ಇಂದಿನ ಓದುಗರು: 23 🟢 ಈಗ ಆನ್‌ಲೈನ್: 1
LATEST NEWS

ಲಿಂಗಸುಗೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ಲಿಂಗಸುಗೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 122 ಸುದ್ದಿಗಳಲ್ಲಿ 1–25 ಸುದ್ದಿಗಳು

ಲಿಂಗಸುಗೂರು ರಾಯಚೂರು

ಇಬ್ಬರು ಅಪರಾಧಿಗಳಿಗೆ 6 ತಿಂಗಳ ಜೈಲು ಶಿಕ್ಷೆ, ತಲಾ ₹3 ಸಾವಿರ ದಂಡ

ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಸುಣಕಲ್ ಗ್ರಾಮದಲ್ಲಿ ನಡೆದ ಜಾತಿ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ ₹3 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಕಮಲದಿನ್ನಿ ಸೇರಿದಂತೆ ಹತ್ತಾರು ಗ್ರಾಮಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ

ತಾಲ್ಲೂಕಿನ ಕಮಲದಿನ್ನಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಸಚಿನ್ ನಗರ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಲಿಂಗಸೂಗೂರು ಬಸ್ ಡಿಪೊ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಕೂಲಿಕಾರರು, ಅಂಗನವಾಡಿ ಮಕ್ಕಳು ಹಾಗೂ ವಸತಿ ಶಾಲೆ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ: ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದೂ

ತಾಲೂಕಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿಕಾರರು, ಅಂಗನವಾಡಿ ಕೇಂದ್ರಗಳ ಮಕ್ಕಳು ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಮತ್ತು ಸೌಲಭ್ಯಗಳ ಒದಗಿಸುವಿಕೆಯಲ್ಲಿ ಯಾವುದೇ ರೀತಿಯ ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಯಚೂರು ಜಿಲ್ಲಾ ಪಂಚಾಯಿತಿ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಅಮೃತಾ ಅಂಬಿಗೇರ ಹಾಗೂ ಇಬ್ಬರು ಮಕ್ಕಳಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಅಂತರ್ಜಾತಿ ವಿವಾಹವಾಗಿರುವ ಕಾರಣಕ್ಕೆ ಮಹಿಳೆ ಹಾಗೂ ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಜಾತಿ ಆಧಾರಿತ ನಿಂದನೆ, ಕೌಟುಂಬಿಕ ದೌರ್ಜನ್ಯ ಮತ್ತು ಸಾಮಾಜಿಕ ಬಹಿಷ್ಕಾರ ಹೇರಲಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ನಕಲಿ ವೈದ್ಯರ ಕ್ಲಿನಿಕ್ ಸೀಜ್: ಕೆಪಿಎಂಇ ಕಾಯ್ದೆಯಡಿ ಕಠಿಣ ಕ್ರಮಕ್ಕೆ ಡಾ. ನಂದಿತಾ ಎಚ್ಚರಿಕೆ

ಲಿಂಗಸುಗೂರು, ನ.6: ಯಾವುದೇ ಮಾನ್ಯತೆ ಪಡೆದ ವೈದ್ಯಕೀಯ ಪದವಿ ಅಥವಾ ಅರ್ಹತೆ ಇಲ್ಲದೆ ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿಕೊಂಡು ಚಿಕಿತ್ಸೆ ನೀಡುತ್ತಿರುವ ನಕಲಿ ವೈದ್ಯರ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಿ, ಎಫ್‌ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಡಿಸೆಂಬರ್ ಅಂತ್ಯದವರೆಗೆ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ

ತಾಲೂಕಿನ ರೈತರ ಜೀವನಾಡಿಯಾಗಿರುವ ನಾರಾಯಣಪುರ ಬಲದಂಡೆ ಹಾಗೂ ರಾಮಪುರ ಏತ ನೀರಾವರಿ ಕಾಲುವೆಗಳಿಗೆ ಡಿಸೆಂಬರ್ ಕೊನೆಯ ವಾರದವರೆಗೆ ನಿರಂತರವಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ಬಸವಸಾಗರ ಕ್ರಾಸ್ ಬಳಿ ನಾಲ್ಕು ಕಡೆ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಲೋಡ್ ಶೆಡ್ಡಿಂಗ್ ನಿಲ್ಲಿಸಿ ರೈತರಿಗೆ ಹಗಲು 9 ಗಂಟೆ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ

ತಾಲೂಕಿನ ವಿವಿಧ ಹೋಬಳಿಗಳಲ್ಲಿ ಅನಿಯಮಿತವಾಗಿ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ರೈತರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ವಿದ್ಯುತ್ ಕಡಿತವನ್ನು ನಿಲ್ಲಿಸಿ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆಯಲ್ಲಿ ನಿರಂತರ 9 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಹಟ್ಟಿಯ ವಿದ್ಯಾರ್ಥಿನಿ ಪವಿತ್ರಾ ಆಯ್ಕೆ

ಪಟ್ಟಣದ ಶ್ರೀ ಶರಣಬಸವೇಶ್ವರ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಪವಿತ್ರಾ ಪರಸಪ್ಪ ಅವರು 2026–27ನೇ ಸಾಲಿನ 17 ವರ್ಷದೊಳಗಿನ ಬಾಲಕಿಯರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಬಸ್ ನಿಲ್ದಾಣದ ಶೌಚಾಲಯದ ಸೆಪ್ಟಿಕ್ ಟ್ಯಾಂಕ್ ಭರ್ತಿ: ದುರ್ವಾಸನೆಯಿಂದ ನಿವಾಸಿಗಳ ಪರದಾಟ

ಪಟ್ಟಣದ ಪುರಸಭೆ ವ್ಯಾಪ್ತಿಯ 7ನೇ ವಾರ್ಡ್‌ನ ಹೊಸ ಬಸ್ ನಿಲ್ದಾಣದ ಸಮೀಪವಿರುವ ಸಾರ್ವಜನಿಕ ಶೌಚಾಲಯದ ಸೆಪ್ಟಿಕ್ ಟ್ಯಾಂಕ್ ತುಂಬಿ, ಮಲಿನ ನೀರು ಚರಂಡಿ ಮೂಲಕ ಹಳ್ಳಕ್ಕೆ ಹರಿಯುತ್ತಿರುವುದರಿಂದ ಸುತ್ತಮುತ್ತಲಿನ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಬೀದಿಬದಿ ವ್ಯಾಪಾರಿಗಳ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪುರಸಭೆಗೆ ಮನವಿ

ಪಟ್ಟಣದ ಬೀದಿಬದಿ ವ್ಯಾಪಾರಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸಿ, ವ್ಯಾಪಾರಿಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಬೀದಿಬದಿ ಮಾರಾಟಗಾರರ ಸಂಘದ (ಟಿಯುಸಿಐ)…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ವಕೀಲರ ಮೇಲಿನ ಹಲ್ಲೆ, ಹತ್ಯೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟನೆ

ರಾಜ್ಯದ ವಿವಿಧೆಡೆ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ, ಹತ್ಯೆ ಹಾಗೂ ಕೊಲೆ ಯತ್ನದ ಘಟನೆಗಳನ್ನು ತೀವ್ರವಾಗಿ ಖಂಡಿಸಿ, ವಕೀಲರಿಗೆ ಸೂಕ್ತ ಭದ್ರತೆ ಒದಗಿಸುವುದರ ಜೊತೆಗೆ ಸಮಗ್ರ ವಕೀಲರ ರಕ್ಷಣಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಲಿಂಗಸುಗೂರು ವಕೀಲರ ಸಂಘದ ವತಿಯಿಂದ ಮಂಗಳವಾರ ನ್ಯಾಯಾಲಯದ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಜಿಲ್ಲಾ ಅಹಿಂದ ಚಳವಳಿಯ ಸಂಚಾಲಕರಾಗಿ ವಕೀಲ ಹರಿಶ್ಚಂದ್ರ ರಾಠೋಡ ನೇಮಕ

ಅಹಿಂದ ಚಳವಳಿಯ ರಾಯಚೂರು ಜಿಲ್ಲಾ ಘಟಕದ ಸಂಚಾಲಕರಾಗಿ ವಕೀಲ ಹರಿಶ್ಚಂದ್ರ ರಾಠೋಡ ಅವರನ್ನು ನೇಮಕ ಮಾಡಿ ಸಂಘಟನೆಯ ರಾಜ್ಯ ನಾಯಕತ್ವ ಆದೇಶ ಹೊರಡಿಸಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಕಸಬಾ ಲಿಂಗಸುಗೂರು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ

ಪಟ್ಟಣದ ಪುರಸಭೆ ವ್ಯಾಪ್ತಿಗೆ ಒಳಪಡುವ ಕಸಬಾ ಲಿಂಗಸುಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಹಟ್ಟಿ ಚಿನ್ನದ ಗಣಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ಪಟ್ಟಣದ ವಿವಿಧೆಡೆ 71ನೇ ಕನ್ನಡ ರಾಜ್ಯೋತ್ಸವವನ್ನು ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಪಾರದರ್ಶಕ ವ್ಯವಹಾರದಿಂದ ಸಹಕಾರಿ ಸಂಘಗಳ ಅಭಿವೃದ್ಧಿ ಸಾಧ್ಯ: ಅಭಿನವ ಗಜದಂಡ ಶಿವಾಚಾರ್ಯರು

ಸಹಕಾರಿ ಸಂಘಗಳು ಕೇವಲ ಹಣಕಾಸಿನ ವ್ಯವಹಾರಗಳಿಗೆ ಸೀಮಿತವಾಗದೆ ಜನರ ಆರ್ಥಿಕ ಪ್ರಗತಿ, ಸಾಮಾಜಿಕ ಏಳಿಗೆ ಹಾಗೂ ಪರಸ್ಪರ ವಿಶ್ವಾಸವನ್ನು ಬೆಳೆಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ದೇವರಭೂಪುರ ಅಮರೇಶ್ವರ ಗುರು ಅಭಿನವ ಗಜದಂಡ ಶಿವಾಚಾರ್ಯರು ಹೇಳಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ನ. 2 ಮತ್ತು 3ರಂದು ಅಂತರ್ ಮಹಿಳಾ ಮಹಾವಿದ್ಯಾಲಯಗಳ ಕಬಡ್ಡಿ, ಥ್ರೋಬಾಲ್ ಪಂದ್ಯಾವಳಿ

ಲಿಂಗಸುಗೂರು: ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಲಿಂಗಸುಗೂರಿನ ಡಾ. ಸುಧಾಮೂರ್ತಿ ಇನೋ ಮಹಿಳಾ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನವೆಂಬರ್ 2 ಮತ್ತು 3ರಂದು ಅಂತರ್ ಮಹಿಳಾ ಮಹಾವಿದ್ಯಾಲಯಗಳ ಕಬಡ್ಡಿ ಮತ್ತು ಥ್ರೋಬಾಲ್ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ರಮೇಶ ವೆಂಕಟಾಪುರ ತಿಳಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ರಾಷ್ಟ್ರಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಆರ್ಯನ್ ಗೌತಮ್ ಆಯ್ಕೆ

2026–27ನೇ ಸಾಲಿನ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ (SGFI) ವತಿಯಿಂದ ಆಯೋಜಿಸಿದ್ದ 14 ವರ್ಷದೊಳಗಿನ ಬಾಲಕರ ರಾಜ್ಯಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಲಿಂಗಸುಗೂರು ತಾಲೂಕಿನ ವಿದ್ಯಾರ್ಥಿ ಆರ್ಯನ್ ಗೌತಮ್ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ನವೆಂಬರ್ 2ರಿಂದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 2ರಿಂದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ ಆಯೋಜಿಸಲಾಗಿದ್ದು, ಅಂತಿಮ ಹಂತದ ಸ್ಪರ್ಧೆಯನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆಸಿ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಆಯೋಜಕ ಚಾಮರಾಜ ತಿಳಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಭೋವಿ ಜಾತಿ ಪ್ರಮಾಣಪತ್ರ ವಿಚಾರ: ಎಂಎಲ್‌ಸಿ ವಿ.ಎಸ್. ಉಗ್ರಪ್ಪ ಅವರಿಗೆ ಬೆದರಿಕೆ ಆರೋಪ ಖಂಡಿಸಿ ಮನವಿ

ಲಿಂಗಸುಗೂರು: ಭೋವಿ ಜಾತಿ ಪ್ರಮಾಣಪತ್ರದ ಸಮಸ್ಯೆ ಪರಿಹಾರಕ್ಕೆ ಶ್ರಮಿಸುತ್ತಿರುವ ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಅವರಿಗೆ ಶಿವಮೊಗ್ಗದಲ್ಲಿ ಕೆಲವರು ಘೇರಾವ್ ಹಾಕಿ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘ ಆಗ್ರಹಿಸಿದೆ.

ಮುಂದೆ ಓದಿ →
ಲಿಂಗಸುಗೂರು

ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳ ಭಾಗವಹಿಸುವಿಕೆ ಕಡ್ಡಾಯ: ಎಸಿ ನಾಗೇಂದ್ರಬಾಬು ಕುಮಾರ

ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು.

ಮುಂದೆ ಓದಿ →
ಲಿಂಗಸುಗೂರು

ಲಿಂಗಸುಗೂರಿನಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ ಹಾಗೂ ತ್ರಿಪದಿ ಸಾಹಿತ್ಯ ವಿಚಾರಗೋಷ್ಠಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಲಿಂಗಸುಗೂರಿನ ಶಾರದಾ ವಿದ್ಯಾಮಂದಿರ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಮತ್ತು ತ್ರಿಪದಿ ಸಾಹಿತ್ಯ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ದುರ್ಗಾಸಿಂಗ್ ತಿಳಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಕರವೇ ಸ್ವಾಭಿಮಾನಿ ಸೇನೆ ಹೋರಾಟಕ್ಕೆ ಸ್ಪಂದನೆ: ಲಿಂಗಸುಗೂರು ಆಸ್ಪತ್ರೆಗೆ ಚರ್ಮರೋಗ ತಜ್ಞರ ನೇಮಕ

ಲಿಂಗಸುಗೂರು: ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲೂಕು ಘಟಕ ನಡೆಸಿದ್ದ ಹೋರಾಟಕ್ಕೆ ಸ್ಪಂದನೆ ದೊರೆತಿದ್ದು, ಚರ್ಮರೋಗ ತಜ್ಞ ಡಾ. ಮಲ್ಲೇಶ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ 2.25 ಲಕ್ಷ ಮತದಾರರು: ಅಂತಿಮ ಪಟ್ಟಿ ಪ್ರಕಟ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ನೇ ಸಾಲಿನಲ್ಲಿ ಕೈಗೊಂಡ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,25,916 ಮತದಾರರನ್ನು ಒಳಗೊಂಡ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಕ್ಷಯರೋಗ ಪತ್ತೆ ಆಂದೋಲನ: ಡಿಸೆಂಬರ್ 8ರವರೆಗೆ ಮನೆಮನೆ ಸಮೀಕ್ಷೆ

ಲಿಂಗಸುಗೂರು: ಕ್ಷಯರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ತಾಲೂಕಿನಲ್ಲಿ ಕ್ಷಯರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಡಿಸೆಂಬರ್ 8ರವರೆಗೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಹನುಮಂತರಾಯ ತಳ್ಳಳ್ಳಿ ತಿಳಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಹಲ್ಕಾವಟಿಗಿ ಗ್ರಾಪಂ ಪಿಡಿಒ ಅಮಾನತಿಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ತಾಲೂಕಿನ ಹಲ್ಕಾವಟಿಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕನಾಳ ಹಾಗೂ ಉಪನಾಳ ಗ್ರಾಮಗಳಿಗೆ ಗ್ರಾಮೀಣ ಉದ್ಯೋಗ ಯೋಜನೆಯಡಿ ಕಾಮಗಾರಿಗಳನ್ನು ಮಂಜೂರು ಮಾಡುವಲ್ಲಿ ಅಧಿಕಾರಿಗಳು ತಾರತಮ್ಯ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡು…

ಮುಂದೆ ಓದಿ →