ದೀಪಾವಳಿ ಹಬ್ಬದ ಬಲಿಪಾಡ್ಯಮಿಯ ಪವಿತ್ರ ದಿನದ ಅಂಗವಾಗಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀ ಬ್ರಹ್ಮಕರಾರ್ಚಿತ ಶ್ರೀ ಮೂಲರಾಮದೇವರು ಸೇರಿದಂತೆ ಶ್ರೀಮಠದ ಸಂಸ್ಥಾನ ಪ್ರತಿಮೆಗಳಿಗೆ ವಿಧಿವಿಧಾನಗಳೊಂದಿಗೆ ಮಹಾಭಿಷೇಕ ನೆರವೇರಿಸಿದರು.
ಹಾಲು, ಮೊಸರು ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಹಾಗೂ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಏರಿಕೆಯನ್ನು ಖಂಡಿಸಿ, ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಯಚೂರು–ದೇವದುರ್ಗ ವಿಧಾನಸಭಾ ಕ್ಷೇತ್ರದ ವತಿಯಿಂದ ಮಂಗಳವಾರ (ನ.10) ಪ್ರತಿಭಟನೆ ನಡೆಸಲಾಯಿತು.
ನಗರದ ಬೃಹಸ್ಪತಿವಾರಪೇಟೆ ಹಾಗೂ ಮಕ್ತಲಪೇಟೆ ಮಧ್ಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಶಾಂಭವಿ ಚಕ್ಲಿ ಕೇಂದ್ರದಲ್ಲಿ ಮೂರನೇ ವರ್ಷದ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರು ಧೈರ್ಯ, ಸಾಹಸ ಹಾಗೂ ದೇಶಪ್ರೇಮದ ಪ್ರತೀಕವಾಗಿದ್ದು, ಅವರ ಹೋರಾಟದ ಇತಿಹಾಸ ಮತ್ತು ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಜರತ್ ಟಿಪ್ಪು ಸುಲ್ತಾನ್ ಸಂಘದ ಪದಾಧಿಕಾರಿ ಮೊಹಮ್ಮದ್ ಮುಸ್ತಫಾ ಅರೋಲಿ…
ಅಖಿಲ ಭಾರತ ವೀರಶೈವ ಮಹಾಸಭಾದ ರಾಯಚೂರು ಜಿಲ್ಲಾ ಕಾರ್ಯನಿರ್ವಾಹಕ ಸಮಿತಿಯ ಖಾಯಂ ಆಹ್ವಾನಿತರನ್ನಾಗಿ ರೇವಣಸಿದ್ದಪ್ಪ ಗರಡಿ ಅವರನ್ನು ನೇಮಕ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಮಿರ್ಜಾಪುರ ಆದೇಶ ಹೊರಡಿಸಿದ್ದಾರೆ.
ಕೊಪ್ಪಳದ ಪವಿತ್ರ ನೆಲದಲ್ಲಿ ಭಕ್ತಿ, ಭಾವೈಕ್ಯತೆ, ಕಾಯಕ ಮತ್ತು ದಾಸೋಹದ ಪರಂಪರೆಯನ್ನು ಜಗತ್ತಿಗೆ ಸಾರುತ್ತಿರುವ ಗವಿಮಠದ ಜಾತ್ರಾ ಮಹೋತ್ಸವವೆಂದರೆ ಅದೊಂದು ಸಾಮಾನ್ಯ ಧಾರ್ಮಿಕ ಉತ್ಸವವಲ್ಲ.
ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಅಗತ್ಯವಿದ್ದು, ಸಂವಿಧಾನ ನೀಡಿರುವ ಹಕ್ಕುಗಳು ಹಾಗೂ ಕಾನೂನುಗಳ ಕುರಿತು ಅರಿವು ಹೊಂದಿದಾಗ ಮಾತ್ರ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಸಾಧ್ಯ ಎಂದು ಮಾನ್ವಿ ಜೆಎಂಎಫ್ಸಿ ಹಾಗೂ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಆನಂದ ಹೆಚ್.
ತಾಲೂಕಿನ ಚಂದ್ರಬಂಡಾ ಗ್ರಾಮದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಬಂಡೆ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ನವೆಂಬರ್ 10ರಿಂದ 12ರವರೆಗೆ ಮೂರು ದಿನಗಳ ಕಾಲ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮದರ್ಕಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳ ದೈವದ ಭಕ್ತರ ಒಗ್ಗಟ್ಟು ಮತ್ತು ಸಹಕಾರದಿಂದ ಅಂಬಾ ಮಠವನ್ನು ಸ್ಥಾಪಿಸಲಾಗಿದ್ದು, ಮಠದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ನರಕ ಚತುರ್ದಶಿ ಪ್ರಯುಕ್ತ ಮಂತ್ರಾಲಯದ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳು ಶ್ರದ್ಧಾಭಕ್ತಿಯಿಂದ ಜರುಗಿದವು.
ಗಾಂಜಾ, ತಂಬಾಕು, ಮದ್ಯಪಾನ ಸೇರಿದಂತೆ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದಲ್ಲದೆ, ಕುಟುಂಬದ ನೆಮ್ಮದಿ ಮತ್ತು ಆರ್ಥಿಕ ಸ್ಥಿರತೆಯೂ ಹಾಳಾಗುತ್ತದೆ.
ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ ನೆಟ್)ಗೆ ಸಿದ್ಧತೆ ನಡೆಸುತ್ತಿರುವ ಸ್ನಾತಕೋತ್ತರ ಪದವೀಧರರು ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಮುಂದುವರಿಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಅಶ್ವಮೇಧ ಫೌಂಡೇಶನ್ ವತಿಯಿಂದ ನವೆಂಬರ್ 14 ಮತ್ತು 15ರಂದು ಎರಡು ದಿನಗಳ…
ತಾಲ್ಲೂಕಿನ ಕಮಲದಿನ್ನಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಸಚಿನ್ ನಗರ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಲಿಂಗಸೂಗೂರು ಬಸ್ ಡಿಪೊ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಿನ ಹರನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಅವರ ಕುಟುಂಬಕ್ಕೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಸರ್ಕಾರದ ವತಿಯಿಂದ ಮಂಜೂರಾದ ₹5 ಲಕ್ಷ ಪರಿಹಾರದ ಚೆಕ್ ವಿತರಿಸಿದರು.
ರಾಯಚೂರು ಜಿಲ್ಲೆಯ ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಸಾಹಿತ್ಯ ಕೃಷಿ ಮಾಡಿರುವ ಸಾಹಿತಿಗಳು, ಲೇಖಕರು, ಕವಿಗಳು, ವಿಮರ್ಶಕರು ಹಾಗೂ ಚಿಂತಕರ ಸಮಗ್ರ ಮಾಹಿತಿಯನ್ನು ಒಳಗೊಂಡ ಪರಿಚಯ ಪುಸ್ತಕವನ್ನು ಹೊರತರಲು ಉದ್ದೇಶಿಸಲಾಗಿದ್ದು, ಸಂಬಂಧಪಟ್ಟವರಿಂದ ಮಾಹಿತಿ ಆಹ್ವಾನಿಸಲಾಗಿದೆ ಎಂದು ಪಟ್ಟಣದ ನೇತಾಜಿ ಪ್ರಕಾಶನದ ಮುಖ್ಯಸ್ಥೆ ಕೆ.
ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ, ಲೇಖಕ, ಸಂಶೋಧಕ ಹಾಗೂ ನಾಟಕಕಾರ ರಾಮಣ್ಣ ಹವಳೆ ಅವರನ್ನು ಸಾಹಿತ್ಯಾಭಿಮಾನಿಗಳು, ಶಿಕ್ಷಕರು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಡಿ ರಾಯಚೂರು ಜಿಲ್ಲೆಯ ಮಾನ್ವಿ, ಸಿರವಾರ ಹಾಗೂ ಸಿಂಧನೂರು ತಾಲೂಕುಗಳಲ್ಲಿ ಸುಮಾರು ₹19 ಕೋಟಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ಭೋವಿ-ವಡ್ಡರ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಬಿ.ಕೆ.
ಅನಾರೋಗ್ಯದಿಂದ ಬಳಲುತ್ತಿದ್ದು, ಕುಟುಂಬದವರಿಂದ ಸೂಕ್ತ ಆರೈಕೆ ದೊರೆಯದೆ ಸಂಕಷ್ಟಕ್ಕೆ ಸಿಲುಕಿದ್ದ ರಾಯಚೂರು ನಗರದ ಎನ್ಜಿಒ ಕಾಲೋನಿ ನಿವಾಸಿ ರಂಗನಾಥ ಕೋರಿಶೆಟ್ಟಿ (55) ಅವರಿಗೆ ಸಿಂಧನೂರಿನ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ಬುದ್ಧಿಮಾಂದ್ಯ ಆಶ್ರಮದಲ್ಲಿ ಆಶ್ರಯ ಕಲ್ಪಿಸುವ ಮೂಲಕ ಮಾನವೀಯತೆ ಮೆರೆಯಲಾಗಿದೆ.