ಲಿಂಗಸುಗೂರು: ಪಟ್ಟಣದಲ್ಲಿ ಸ್ವಚ್ಛ ಭಾರತ ಅಭಿಯಾನ 2.0 ಯೋಜನೆಯಡಿ ‘ಸ್ವಚ್ಛತೆಯೇ ಸೇವೆ-2026’ ಕಾರ್ಯಕ್ರಮದ ಅಂಗವಾಗಿ ವಾರ್ಡ್ ನಂ.18ರಲ್ಲಿ ಸಾರ್ವಜನಿಕರಿಗೆ ಮನೆಯಲ್ಲಿಯೇ ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿಸುವ (ಹೋಮ್ ಕಾಂಪೋಸ್ಟಿಂಗ್) ಕುರಿತು ತರಬೇತಿ ನೀಡಲಾಯಿತು.
ಲಿಂಗಸುಗೂರು: ತಾಲೂಕಿನ ನಿಲೋಗಲ್ ಗ್ರಾಮದಲ್ಲಿ ರೈತರ ಜಮೀನುಗಳಿಗೆ ತೆರಳುವ ದಾರಿಗಳನ್ನು ಸುಗಮಗೊಳಿಸುವುದು ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ವತಿಯಿಂದ ತಾಲೂಕು ಪಂಚಾಯಿತಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು.
ಲಿಂಗಸುಗೂರು: ವಾಜಪೇಯಿ ನಗರ ನಿವೇಶನ ಯೋಜನೆಯಡಿ ಪುರಸಭೆ ವ್ಯಾಪ್ತಿಯ ಬಡ ಹಾಗೂ ನಿವೇಶನರಹಿತ ಕುಟುಂಬಗಳಿಗೆ ವಾಸಿಸಲು ಯೋಗ್ಯವಾದ ಭೂಮಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ದೇವದುರ್ಗ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 48ನೇ ವಾರ್ಷಿಕ ಮಹಾಸಭೆ ಬುಧವಾರ ಸಂಘದ ಕಚೇರಿಯಲ್ಲಿ ನಡೆಯಿತು. ಸದಸ್ಯರ ಸೂಚನೆಯಂತೆ ಶಿವಪ್ಪ ಬಲ್ಲಿದ್ದವ ಅವರನ್ನು ಸಭಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ದೇವದುರ್ಗ: ಗಣೇಶನ ವಿಗ್ರಹದ ಪ್ರತಿಯೊಂದು ಅಂಗವೂ ಮನುಷ್ಯನ ಬದುಕಿಗೆ ವಿಶಿಷ್ಟ ಸಂದೇಶ ಹಾಗೂ ನೈತಿಕ ಮೌಲ್ಯವನ್ನು ಸಾರುತ್ತದೆ. ಶರಣರ ವಚನಗಳು, ಪುರಾಣಗಳು ಹಾಗೂ ಸಂತರ ವಿಚಾರಗಳನ್ನು ಅಧ್ಯಯನ ಮಾಡಿ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಷೇಕ್ ಬಳೆ ಮಸರಕಲ್ ಹೇಳಿದರು.
ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದ ಜೆ.ಜೆ. ಕಲ್ಯಾಣ ಮಂಟಪದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾನ್ವಿ: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಪಂಪಾ ವಿರೂಪಾಕ್ಷೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮಾನ್ವಿ: ಪಟ್ಟಣದ ಲೋಯೋಲಾ ಕಾಲೇಜು ಆವರಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ಮಾನ್ವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಮಾನ್ವಿ: ರಾಷ್ಟ್ರೀಯ ಸೇವಾ ಯೋಜನೆಯ ‘ನನಗಲ್ಲ, ನಿನಗಾಗಿ’ ಎಂಬ ಧ್ಯೇಯವಾಕ್ಯವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಆಂಜನೇಯ ನಸಲಾಪುರ ಹೇಳಿದರು.
ರಾಯಚೂರು, ಸೆ.24: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ ಹಾಗೂ ಬದುಕಿನ ಮೌಲ್ಯಗಳನ್ನು ಕಲಿಸಿಕೊಡುತ್ತದೆ. ಭಾವೈಕ್ಯತೆ ಮತ್ತು ಸಹಬಾಳ್ವೆಯನ್ನು ರೂಢಿಸಿಕೊಂಡರೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಎ.
ರಾಯಚೂರು: ನಗರದ ಹರಿಜನವಾಡ ಬಡಾವಣೆಯ ಶ್ರೀ ಸವರಮ್ಮ ಗುಡಿ ಗಜಾನನ ಯುವಕ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ‘ಬಿಗ್ ಡ್ಯಾಡಿ 3.0’ ಗಜಾನನ ಮೂರ್ತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವೈಭವ ಹಾಗೂ ಅದ್ದೂರಿಯಾಗಿ ನೆರವೇರಿತು.
ರಾಜಕಾಲುವೆ ಅವ್ಯವಸ್ಥೆ: ಶಿವರಾಜ ಪಾಟೀಲ್, ರವಿ ಬೋಸರಾಜು ವಿರುದ್ಧ ರಾಮನಗೌಡ ಏಗನೂರು ಆರೋಪ ರಾಯಚೂರು, ಸೆ.24: ನಗರದ ವಾರ್ಡ್ ನಂ.14ರ ಮಂಗಳಾರ್ಪೇಟೆಯಲ್ಲಿ ರಾಜಕಾಲುವೆ, ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಗುರುವಾರ ಪರಿಶೀಲಿಸಿ, ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು…
ರಾಯಚೂರು, ಸೆ.24: ಕರ್ನಾಟಕ ರಾಜ್ಯ ಭೋವಿ-ವಡ್ಡರ ಸಮಾಜದ ರಾಯಚೂರು ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ನಗರದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆಯಿತು.
ಮಾನ್ವಿ: ತಾಲೂಕಿನಲ್ಲಿ ಪ್ರಭಾರಿ ಎಂಆರ್‌ಡಬ್ಲ್ಯು (MRW) ಆಗಿ ಕಾರ್ಯನಿರ್ವಹಿಸುತ್ತಿರುವ ರಾಘವೇಂದ್ರ ಅವರ ವಿರುದ್ಧ ಕರ್ತವ್ಯ ಲೋಪ, ದಲಿತ ನೌಕರರಿಗೆ ಕಿರುಕುಳ ಹಾಗೂ ಇತರ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ದಲಿತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.
ಮಂತ್ರಾಲಯ: ಮಂತ್ರಾಲಯದಲ್ಲಿ ತುಂಗಭದ್ರಾ ನದಿಯ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತ ಮಂಡಳಿ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.
ಸಿಂಧನೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡಬೇಕು ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಫಾ. ಜಾರ್ಜ್ ಪಿಂಟೋ ಹೇಳಿದರು.
ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ್ ಯೋಜನೆ, ಸಾಧನೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ…
ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಸಮಗ್ರ ಶಿಕ್ಷಣ ಕರ್ನಾಟಕ ರಾಯಚೂರು ವತಿಯಿಂದ 2026-27ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಬAಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ…
ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ಇವರ ಸಹಯೊಗದೊಂದಿಗೆ 2026-27ನೇ ಸಾಲಿನಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಲ್ಲಿ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಅರ್ಹ…
ರಾಯಚೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ‘ದಿವಾಳಿ ಸರ್ಕಾರದ ಶವಯಾತ್ರೆ’ ಹೆಸರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಯಚೂರು, ಸೆ.24: ಪತ್ರಕರ್ತರು ದಿನನಿತ್ಯದ ಒತ್ತಡದ ವೃತ್ತಿಜೀವನದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅಗತ್ಯ ಎಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ ಹೇಳಿದರು.
ರಾಯಚೂರು: ಹೋಟೆಲ್, ದಾಬಾ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ದಿಢೀರ್ ತಪಾಸಣೆ ನಡೆಸಿದ್ದು, ನಿಯಮ ಉಲ್ಲಂಘಿಸಿದ ಹಲವು ಆಹಾರ ಮಳಿಗೆಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.